ಬೆಂಗಳೂರು : ರಸ್ತೆ ಅಭಿವೃದ್ಧಿ ಕಾರ್ಯ ಆಗಬೇಕಾದರೆ ಗ್ಯಾರಂಟಿ ಬಿಡಿ ಎಂಬ ರಾಯರೆಡ್ಡಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಕೊಪ್ಪಳದ ಮಾತನಾಡಿದ ಶಾಸಕ ಬಸವರಾಜ ರಾಯರೆಡ್ಡಿ, ನಮಗೆ ಗ್ಯಾರಂಟಿ ಬೇಡ ಎಂದು ಹೇಳಿ. ನಮ್ಮ ಜನ ಏನೂ ಬೇಡ ಎನ್ನುತ್ತಿದ್ದಾರೆ ಎಂದು ಸಿದ್ದರಾಮಯ್ಯರಿಗೆ ಸಲಹೆ ಕೊಡುತ್ತಿನಿ ಎಂದು ಹೇಳಿದ್ದರು.
ಇದೀಗ ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಎಲ್ಲಾ ಬಡವರ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕಾರ್ಯಕ್ರಮವಾಗಿದೆ. ಹೀಗಿರುವಾಗ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವ ಪ್ರಶ್ನೆ ಇಲ್ಲ ಎಂದರು.