ಬೆಳಗಾವಿ: ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಬಂದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಮಾಜಿ ಸಿಎಂ ದಿ. ದೇವರಾಜ್ ಅರಸು ದಾಖಲೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮುರಿದಿದ್ದಾರೆ.
ಅವರು ಅತ್ಯಂತ ಶ್ರಮಪಟ್ಟು ಈ ಸ್ಥಾನಕ್ಕೆ ತಲುಪಿದ್ದು ಹೆಮ್ಮೆಯ ವಿಷಯ. ಐದು ವರ್ಷ ಸಿಎಂ ಅವಧಿಯಲ್ಲಿ ಅವರು ಮುಂದುವರೆಯುತ್ತಾರೆಂದು ಸ್ವತಃ ಅವರೇ ಹೇಳಿದ್ದಾರೆ. ಮುಂದಿನ ಬಜೆಟ್ ಕೂಡ ಅವರೇ ಮಂಡಿಸುತ್ತಾರೆ ಎಂದರು.
ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಗೊಂದಲಗಳು ಇದ್ದೇ ಇರುತ್ತವೆ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಬಂದಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಎರಡನೇ ಮಹಾಯುದ್ಧ ಗ್ರಾಮ ಪಂಚಾಯಿತಿ ಚುನಾವಣೆ. ಇದರಲ್ಲಿ ಜಾರಕಿಹೊಳಿ ಅವರನ್ನು ಸೋಲಿಸುವುದೇ ನಮ್ಮ ಗುರಿ ಎಂಬ ಮಾಜಿ ಸಂಸದ ರಮೇಶ್ ಕತ್ತಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲರೂ ಗೆಲ್ಲಬೇಕು ಎಂದೇ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. 2028 ಬಂದಾಗ ನೋಡೋಣ, ನಮ್ಮ ಹೋರಾಟವನ್ನು ಬಹಿರಂಗವಾಗಿ ಹೇಳುವುದಿಲ್ಲ ಎಂದು ತಿರುಗೇಟು ನೀಡಿದರು.




