ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜ್ಯದ ಮೇಲೂ ತಟ್ಟಿದ್ದು, ವಾಣಿಜ್ಯ ಬಳಕೆಯ ಅಡುಗೆ ಅನಿಲ (LPG) ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಹೋಟೆಲ್ಗಳಿಗೆ ಬೇಡಿಕೆಗೆ ತಕ್ಕಂತೆ ಸಿಲಿಂಡರ್ ಒದಗಿಸುವುದು ಸದ್ಯಕ್ಕೆ ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯರಾದ ಐವಾನ್ ಡಿಸೋಜಾ ಮತ್ತು ನಾಗರಾಜ್ ಯಾದವ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ಯಾಸ್ ಕೊರತೆಯಿಂದಾಗಿ ಪೂರೈಕೆಯಲ್ಲಿ ಆದ್ಯತೆ ನಿಗದಿಪಡಿಸಲಾಗಿದೆ ಎಂದರು.
ಆಸ್ಪತ್ರೆಗಳು, ವಿದ್ಯಾರ್ಥಿ ನಿಲಯಗಳು ಮತ್ತು ವಸತಿ ಶಾಲೆಗಳಿಗೆ ಮೊದಲ ಆದ್ಯತೆಯ ಮೇಲೆ ಗ್ಯಾಸ್ ಪೂರೈಸಲು ತೈಲ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ವಾಣಿಜ್ಯ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಹೋಟೆಲ್ಗಳಿಗೆ ಸಿಲಿಂಡರ್ ಒದಗಿಸುವುದು ಸವಾಲಾಗಿದೆ., ಆಸ್ಪತ್ರೆ ಹಾಗೂ ಹಾಸ್ಟೆಲ್ಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಮತ್ತು ಶೀಘ್ರವೇ ಪೂರೈಕೆ ಸಹಜ ಸ್ಥಿತಿಗೆ ಬರಲಿದೆ ಎಂದು ಭರವಸೆ ನೀಡಿದ್ದಾರೆ.
ಹೋಟೆಲ್ಗಳಿಗೆ ಸದ್ಯಕ್ಕೆ ಸಾಕಷ್ಟು ದಾಸ್ತಾನು ಇಲ್ಲದಿದ್ದರೂ, ಮುಂದಿನ 10 ದಿನಗಳಲ್ಲಿ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.
ತೈಲ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಪರಿಸ್ಥಿತಿಯನ್ನು ಸುಧಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಹೋಟೆಲ್ಗಳಿಗೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಅನ್ನು ಬೇಡಿಕೆಗೆ ಅನುಗುಣವಾಗಿ ಒದಗಿಸಲು ಸದ್ಯಕ್ಕೆ ಸಾಧ್ಯವಿಲ್ಲ. ಆದರೆ ಆಸ್ಪತ್ರೆ, ವಸತಿ ನಿಲಯ, ವಸತಿ ಶಾಲೆಗಳಿಗೆ ಆದ್ಯತೆ ಮೇರೆಗೆ ಅಡುಗೆ ಅನಿಲ ಪೂರೈಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ಆಸ್ಪತ್ರೆ, ವಸತಿ ನಿಲಯ ಮತ್ತು ವಸತಿ ಶಾಲೆಗಳಿಗೆ ಆದ್ಯತೆ ಮೇರೆಗೆ ವಾಣಿಜ್ಯ ಗ್ಯಾಸ್ ಪೂರೈಸಲು ಸೂಚಿಸಲಾಗಿದೆ. ಹೋಟೆಲ್ಗಳಿಗೆ ಸಿಲಿಂಡರ್ ಪೂರೈಸಲು ಸದ್ಯದ ಮಟ್ಟಿಗೆ ಸಾಕಷ್ಟು ದಾಸ್ತಾನಿಲ್ಲ. ಇನ್ನು 10 ದಿನಗಳೊಳಗೆ ಸಮಸ್ಯೆ ಪರಿಹಾರವಾಗುವ ವಿಶ್ವಾಸವಿದೆ ಎಂದರು.




