Ad imageAd image

ಬೆಳಗಾವಿ ರಾಜ್ಯೋತ್ಸವ ವೇಳೆ ಕಳ್ಳರ ಕೈಚಳಕ : 300ಕ್ಕೂ ಹೆಚ್ಚು ಮೊಬೈಲ್ ಕಳವು

Bharath Vaibhav
ಬೆಳಗಾವಿ ರಾಜ್ಯೋತ್ಸವ ವೇಳೆ ಕಳ್ಳರ ಕೈಚಳಕ : 300ಕ್ಕೂ ಹೆಚ್ಚು ಮೊಬೈಲ್ ಕಳವು
WhatsApp Group Join Now
Telegram Group Join Now

ಬೆಳಗಾವಿ: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಕಳ್ಳರು ಕೈಚಳಕ ತೋರಿಸಿದ್ದು, 300ಕ್ಕೂ ಹೆಚ್ಚು ಮೊಬೈಲ್ ಕಳವು ಮಾಡಲಾಗಿದೆ.ನಿನ್ನೆ ಸಂಜೆ 7 ಗಂಟೆಯಿಂದ ರಾತ್ರಿ 10 ಗಂಟೆ ಅವಧಿಯಲ್ಲಿ 300ಕ್ಕೂ ಅಧಿಕ ಮೊಬೈಲ್ ಗಳನ್ನು ಕಳವು ಮಾಡಲಾಗಿದೆ.

ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಸುತ್ತಮುತ್ತ ಮೆರವಣಿಗೆ ವೇಳೆಯಲ್ಲಿ ಮೊಬೈಲ್ ಗಳನ್ನು ಕಳವು ಮಾಡಲಾಗಿದೆ.ಯುವಕರು, ಯುವತಿಯರನ್ನು ಟಾರ್ಗೆಟ್ ಮಾಡಿ ಕಳ್ಳರ ಗ್ಯಾಂಗ್ ಕೃತ್ಯ ಎಸಗಿದೆ.

ಆಯಪ್ ಮೂಲಕ ಮೊಬೈಲ್ ಕಳೆದುಕೊಂಡವರು ದೂರು ಸಲ್ಲಿಸಿದ್ದಾರೆ. ದೂರಿನ ಪ್ರತಿಗೆ ಠಾಣೆಗೆ ಆಗಮಿಸಿ ಮೊಬೈಲ್ ಹುಡುಕಿಕೊಡಲು ಮನವಿ ಮಾಡಿಕೊಂಡಿದ್ದಾರೆ. ಬೆಳಗ್ಗೆಯಿಂದ 300ಕ್ಕೂ ಹೆಚ್ಚು ಜನರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಳಗಾವಿಯ ಕಡೆ ಬಜಾರ್, ಮಾರ್ಕೆಟ್, ಕ್ಯಾಂಪ್ ಪೊಲೀಸ್ ಠಾಣೆಗಳಿಗೆ ದೂರು ಸಲ್ಲಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!