ಇಂದು ಹಾಸನ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಆಯೋಜಿಸಲಾದ ಮೂರನೇ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಭಾಗವಹಿಸಿದೆ.
ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಯ ಕುರಿತಂತೆ ವಿವಿಧ ವಿಚಾರಗಳನ್ನು ಚರ್ಚಿಸಲಾಯಿತು. ವಿವಿಧ ಯೋಜನೆಗಳ ಅನುಷ್ಠಾನದ ಕುರಿತಂತೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಯೋಜನೆಗಳನ್ನು ಸೂಕ್ತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಲಾಯಿತು.

ಈ ಸಭೆಯಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿಗೆ ಚಾಲನೆ ನೀಡಲಾಯಿತು.
ಸಭೆಯಲ್ಲಿ ಹಾಸನ ಲೋಕಸಭಾ ಸದಸ್ಯರಾದ ಶ್ರೀ Shreyas M Patel ರವರು ಜಿಲ್ಲಾಧಿಕಾರಿಗಳಾದ ಶ್ರೀಮತಿ ಸತ್ಯಭಾಮಾ, ಜಿಲ್ಲಾ ಪಂಚಾಯತ್ ಸದಸ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ :ರಾಜು ಅರಸಿಕೆರೆ ಹಾಸನ್




