Ad imageAd image

ಇಂದು ಸಂಜೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಭೀಮಣ್ಣ ಖಂಡ್ರೆ ಅಂತಿಮ ಸಂಸ್ಕಾರ

Bharath Vaibhav
ಇಂದು ಸಂಜೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಭೀಮಣ್ಣ ಖಂಡ್ರೆ ಅಂತಿಮ ಸಂಸ್ಕಾರ
WhatsApp Group Join Now
Telegram Group Join Now

ಬೀದರ್: ಮಾಜಿ ಸಚಿವ, ಶತಾಯುಷಿ ಡಾ.ಭೀಮಣ್ಣ ಖಂಡ್ರೆ(103) ಇಹಲೋಕ ತ್ಯಜಿಸಿದ್ದಾರೆ. ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಕೆಲವು ದಿನಗಳ ಹಿಂದೆ ಭಾಲ್ಕಿಯ ನಿವಾಸಕ್ಕೆ ಕರೆತರಲಾಗಿತ್ತು.

ನಿನ್ನೆ ರಾತ್ರಿ 10.50ರ ಸುಮಾರಿಗೆ ಭೀಮಣ್ಣ ಖಂಡ್ರೆ ಕೊನೆಯುಸಿರೆಳೆದಿದ್ದಾರೆ.ಅವರ ಪಾರ್ಥಿವ ಶರೀರವನ್ನು ಭಾಲ್ಕಿಯ ಗಾಂಧಿಗಂಜ್ ನಲ್ಲಿರುವ ಅವರ ಮನೆಯ ಆವರಣದಲ್ಲಿ ಶನಿವಾರ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು.

ಸಂಜೆ 5 ಗಂಟೆಗೆ ಭಾಲ್ಕಿಯ ಚಿಕಲ್ ಚಂದ ರಸ್ತೆಯಲ್ಲಿರುವ ಶಾಂತಿಧಾಮದಲ್ಲಿ ಭೀಮಣ್ಣ ಖಂಡ್ರೆಯವರ ಶ್ರೀಮತಿ ಲಕ್ಷ್ಮೀಬಾಯಿ ಅವರ ಸಮಾಧಿ ಪಕ್ಕದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನೆರವೇರಲಿದೆ.

ಪುತ್ರ ಈಶ್ವರ್ ಖಂಡ್ರೆ ಈ ಬಗ್ಗೆ ಮಾಹಿತಿ ನೀಡಿದ್ದು, ಅಂತಿಮ ದರ್ಶನದ ನಂತರ ಮೆರವಣಿಗೆಯಲ್ಲಿ ಪಾರ್ಥಿವ ಶರೀರ ಕೊಂಡೊಯ್ದು ಶಾಂತಿಧಾಮದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಿಸಲಾಗುವುದು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!