Ad imageAd image

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಕರೆ

Bharath Vaibhav
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಕರೆ
WhatsApp Group Join Now
Telegram Group Join Now

ಚೆನ್ನೈ : ರಾಷ್ಟ್ರೀಯ ತನಿಖಾ ಸಂಸ್ಥೆಯ(ಎನ್‌ಐಎ) ಕಚೇರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ರಾಜಧಾನಿ ಚೆನ್ನೈನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯ(ಎನ್‌ಐಎ) ಕಚೇರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದಾನೆ. ಇಂದು ಬೆಳಿಗ್ಗೆ ಪುರಸೈವಾಕಂನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎನ್‌ಐಎ ಕಚೇರಿಗೆ ದೂರವಾಣಿ ಕರೆ ಮಾಡಿದ್ದಾನೆ. ಕರೆ ಮಾಡಿದ ವ್ಯಕ್ತಿ ಹಿಂದಿ ಭಾಷೆಯಲ್ಲಿ ಮಾತನಾಡಿ, ಮೋದಿ ಅವರನ್ನು ಕೊಲ್ಲುವುದಾಗಿ ಹೇಳಿದ್ದಾನೆ.

ಈ ಬಗ್ಗೆ ಸಂಸ್ಥೆಯ ಅಧಿಕಾರಿಗಳು ಚೆನ್ನೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ತನಿಖೆ ಕೈಗೊಂಡಿರುವ ಸೈಬರ್‌ ಅಪರಾಧ ವಿಭಾಗದ ಪೊಲೀಸರು, ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!