Ad imageAd image

ಮುತ್ತಗಾದಲ್ಲಿ ಅಂಬಿಗರ ಚೌಡಯ್ಯ ಮೂರ್ತಿ ವಿರೂಪಗೊಳಿಸಿದ ಪ್ರಕರಣ : ಮೂವರು ಆರೋಪಿಗಳ ಬಂಧನ.

Bharath Vaibhav
ಮುತ್ತಗಾದಲ್ಲಿ ಅಂಬಿಗರ ಚೌಡಯ್ಯ ಮೂರ್ತಿ ವಿರೂಪಗೊಳಿಸಿದ ಪ್ರಕರಣ : ಮೂವರು ಆರೋಪಿಗಳ ಬಂಧನ.
WhatsApp Group Join Now
Telegram Group Join Now

ಕಲಬುರಗಿ : ಚಿತ್ತಾಪುರ ಮತಕ್ಷೇತ್ರದ ಶಹಾಬಾದ್ ತಾಲ್ಲೂಕಿನ ಮುತ್ತಗಾದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅವರ ಮೂರ್ತಿ ವಿರೂಪ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಅಡ್ಡೂರು ಶ್ರೀನಿವಾಸಲು ಹೇಳಿದ್ದಾರೆ.

ಜೀವಣಗಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ್ ವಿಶ್ವಾರಾಧ್ಯ ಪಾಟೀಲ್, ಮುತ್ತಗಾ ಗ್ರಾಮದ ಸಾಬಣ್ಣ ಮಲ್ಲಪ್ಪ ಪಟ್ಟೇದಾರ ಹಾಗೂ ಮುತ್ತಗಾ ಗ್ರಾಮದ ಶಿವರಾಜ್ ಶಂಕರ ನಾಟಿಕಾರ ಬಂಧಿತ ಆರೋಪಿಗಳಾಗಿದ್ದಾರೆ ಎಂದು ತಿಳಿಸಿದರು.

ಅ.10 ರಂದು ಬೆಳಗಿನ ಜಾವ ಶಹಾಬಾದ್ ತಾಲ್ಲೂಕಿನ ಮುತ್ತಗಾ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ವಿರೂಪಗೊಳಿಸಿ, ಆರೋಪಿಗಳು ಪರಾಯಿಯಾಗಿದ್ದರು. ಈ ಕುರಿತು ಶಹಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಅಪರ ಪೊಲೀಸ್ ಅಧೀಕ್ಷಕ ಮಹೇಶ್ ಮೇಘಣ್ಣನವರ, ಡಿವೈಎಸ್ಪಿ ಶಂಕರಗೌಡ ಪಾಟೀಲ್, ಪಿಐ ನಟರಾಜ್ ಲಾಡೆ, ಸಿಪಿಐ ಚಂದ್ರಶೇಖರ್ ತಿಗಡಿ, ಜಗದೇವಪ್ಪ ಪಾಳಾ ಅವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು. ತೀವ್ರ ತನಿಖೆ ನಡೆಸಿದ ಬಳಿಕ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಶ್ವಾನ ದಳ ಸಹಾಯ ಪಡೆದುಕೊಂಡು ಆರೋಪಿಗಳನ್ನು ಖಚಿತಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಬಂಧಿತ ಆರೋಪಿಗಳಲ್ಲಿ ಇಬ್ಬರು ಕೋಲಿ ಸಮುದಾಯಕ್ಕೆ ಸೇರಿದ್ದವರಾಗಿದ್ದು, ಇವರು ಮೂರ್ತಿ ವಿರೂಪ ಮಾಡಿದರೆ ಮುಂದಿನ ದಿನಗಳಲ್ಲಿ ಅದರ ಅಭಿವೃದ್ಧಿ ಆಗುತ್ತದೆ ಎಂದು ಕಾರಣ ಇಟ್ಟುಕೊಂಡು ಮೂರ್ತಿಗೆ ಅಪಮಾನ ಮಾಡಿದ್ದಾರೆ ಎಂದು ಎಸ್ಪಿ ಅಡ್ಡೂರು ಶ್ರೀನಿವಾಸಲು ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಹೇಶ್ ಮೇಘಣ್ಣನವರ, ಡಿವೈಎಸ್ಪಿ ಶಂಕರಗೌಡ ಪಾಟೀಲ್, ಪಿಐ ನಟರಾಜ್ ಲಾಡೆ, ಸಿಪಿಐ ಚಂದ್ರಶೇಖರ್ ತಿಗಡಿ, ಜಗದೇವಪ್ಪ ಪಾಳಾ ಮತ್ತಿತ್ತರರು ಇದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!