ಬಾಗಲಕೋಟೆ : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಾಗಲಕೋಟೆಯ ಸೀಮಿಕೇರಿ ಬೈಪಾಸ್ ನಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಕಲಾದಗಿ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾಲಕರು ಗದ್ದನಕೆರೆ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಬೈಕ್ ನಲ್ಲಿ ತೆರಳುತ್ತಿದ್ದರು.ಈ ವೇಳೆ ವೇಗವಾಗಿ ಬಂದ ಕ್ಯಾಂಟರ್ ಬೈಕ್ ಗೆ ಡಿಕ್ಕಿಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




