Ad imageAd image

ರೆಸಾರ್ಟ್‌ ನ ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವು 

Bharath Vaibhav
ರೆಸಾರ್ಟ್‌ ನ ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವು 
WhatsApp Group Join Now
Telegram Group Join Now

ಮಂಗಳೂರು : ಭಾನುವಾರ ಮಂಗಳೂರಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಮಂಗಳೂರಿನ ಸೋಮೇಶ್ವರ ಉಚ್ಚಿಲದ ಖಾಸಗಿ ರೆಸಾರ್ಟ್‌ ನ ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ.

ಮೈಸೂರು ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.ಮೃತರನ್ನು ಕೀರ್ತನಾ ಎನ್ (21), ನಿಶಿತಾ ಎಂ ಡಿ (21) ಮತ್ತು ಪಾರ್ವತಿ ಎಸ್ (20) ಎಂದು ಗುರುತಿಸಲಾಗಿದೆ.

ಈ ಮೂವರು ಯುವತಿಯರು ಶನಿವಾರ ಮುಂಜಾನೆ ರೆಸಾರ್ಟ್‌ ಗೆ ಬಂದಿದ್ದರು. ರವಿವಾರ ಬೆಳಗ್ಗೆ 10.30 ಸಮಯಕ್ಕೆ ಈಜುಕೊಳದಲ್ಲಿ ಈ ಘಟನೆ ನಡೆದಿದೆ.

ಆರಂಭದಲ್ಲಿ ಓರ್ವ ಯುವತಿ ನೀರಿನಲ್ಲಿ ಮುಳುಗಿದ್ದು, ರಕ್ಷಣೆಗೆ ಮುಂದಾಗಿದ ಮತ್ತೊಬ್ಬಾಕೆಯೂ ಮುಳುಗಿದ್ದ ಕಾರಣ ಮೂರನೇ ಯುವತಿಯೂ ನೀರಿಗೆ ಇಳಿದಿದ್ದಾಳೆ.

ಕೆಲವೇ ನಿಮಿಷದ ಅಂತರದಲ್ಲಿ ಈ ಘಟನೆ ನಡೆದಿದೆ. ಯುವತಿಯರ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!