Ad imageAd image

ರೀಲ್ಸ್ ಹುಚ್ಚಿಗೆ ಬೆಂಗಳೂರಿನಲ್ಲಿ ಮೂವರು ಬಲಿ

Bharath Vaibhav
ರೀಲ್ಸ್ ಹುಚ್ಚಿಗೆ ಬೆಂಗಳೂರಿನಲ್ಲಿ ಮೂವರು ಬಲಿ
WhatsApp Group Join Now
Telegram Group Join Now

ಬೆಂಗಳೂರು : ರೀಲ್ಸ್ ಹುಚ್ಚಿಗೆ ಮತ್ತೆ ಮೂವರು ಬಲಿಯಾಗಿರುವ ಘಠನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರವಲಯದ ಸಿದ್ದೆನಾಯನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ.

ರೀಲ್ಸ್‌ ಮಾಡುವಾಗ ರೈಲು ಡಿಕ್ಕಿ ಹೊಡೆದು ಉತ್ತರ ಪ್ರದೇಶ ಮೂಲದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.ಮೃತರನ್ನು ರಾಹುಲ್ (18), ಬಿಕೇಶ್ (20) ಮತ್ತು ಲಲನ್ (24) ಎಂದು ಗುರುತಿಸಲಾಗಿದೆ.

ಮೃತ ಯುವಕರು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಮುಗಿಸಿಕೊಂಡು ರೈಲ್ವೆ ಹಳಿ ಬಳಿ ಬಂದು ರೀಲ್ಸ್ ಮಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ಯುವಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಶವಂತಪುರ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!