ಧಾರವಾಡ : ಧಾರವಾಡದಲ್ಲಿ ಭೀಕರವಾದ ಕೊಲೆಯಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಬಾಲಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ ಸಂಜೆ ಈ ಕೊಲೆ ನಡೆದಿದೆ.
ಕೊಲೆಯಾದ ಬಾಲಕನನ್ನು ನಿಂಗರಾಜ್ ಅವರಿ (16) ಎಂದು ತಿಳಿದುಬಂದಿದೆ ಅನುದಾನಿತ ಶಾಲೆಯಲ್ಲಿ ಕೊಲೆಯಾದ ನಿಂಗರಾಜ್ ಎಸ್ ಎಸ್ ಎಲ್ ಸಿ ಓದುತ್ತಿದ್ದ ಕ್ಷುಲ್ಲಕ ವಿಚಾರವಾಗಿ ಜಗಳ ಮಾಡಿಕೊಂಡು ಮೂವರು ಅಪ್ರಾಪ್ತ ಬಾಲಕರು ಸೇರಿ ನಿಂಗರಾಜನನ್ನು ಕೊಲೆ ಮಾಡಿದ್ದಾರೆ.
ಸದ್ಯ ಪೊಲೀಸರು ಮೂವರು ಅಪರಾಪ್ತರನ್ನು ಅರೆಸ್ಟ್ ಮಾಡಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




