ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆಯಲ್ಲಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಕಾರಿನಲ್ಲಿದ್ದ ಗೋಪಾಲ್ , ಪತ್ನಿ ಶಶಿಕಲಾ , ಮಗಳು ದೀಪಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.