ದಾವಣಗೆರೆ : ದಾವಣಗೆರೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಬಸ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ದಾವಣಗೆರೆ ಜಿಲ್ಲೆಯ ಅತ್ತಿಗೆರೆ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಮಾರುತಿ ಇಕೋ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರ ಸ್ಥಿತಿ ಗಂಭೀರವಾಗಿದೆ. ಬಸವರಾಜಪ್ಪ, ಶ್ರೀಧರ್, ವಿಜಯಕುಮಾರ್ ಅಸುನೀಗಿದ್ದಾರೆ. ಮೃತರು ಬೆಳಗಾವಿ ಜಿಲ್ಲೆಯ ಕಾಗವಾಡದವರು ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.