ಧಾರವಾಡ: ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಮೂರು ಅಂಗಡಿಗಳು ಬೆಂಕಿಗಾಹುತಿಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ನಗರದ ಮಾಳಮಡ್ಡಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಹಣ್ಣಿನ ಅಂಗಡಿ ಸೇರಿದಂತೆ ಎರಡು ಅಂಗಡಿಗಳು ಸುಟ್ಟು ಕರಕಲಾಗಿವೆ.ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಿದ್ದಂತೆ ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಭಾರಿ ಅನಾಹುತವೊಂದು ತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು, ಹಣ್ಣುಗಳು ನಾಶವಾಗಿವೆ.




