ಹುಬ್ಬಳ್ಳಿ : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಹುಬ್ಬಳ್ಳಿಯಲ್ಲಿ, ಹೊರವಲಯದ ನೂಲ್ವಿ ಕ್ರಾಸ್ ನಲ್ಲಿ ರಸ್ತೆ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿ ಮೂವರು ಮಹಿಳೆಯರು ಸಾವನಪ್ಪಿದ್ದಾರೆ.
ಕಾರು ವರೂರ ಗ್ರಾಮದಿಂದ ಹುಬ್ಬಳ್ಳಿಯ ತ್ತ ಬರುತ್ತಿತ್ತು.ಈ ವೇಳೆ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಮೃತರು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.