Ad imageAd image

ಸಾಲಗಾರರ ಕಾಟಕ್ಕೆ ಬೇಸತ್ತು ಸೆಲ್ಪಿ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ

Bharath Vaibhav
ಸಾಲಗಾರರ ಕಾಟಕ್ಕೆ ಬೇಸತ್ತು ಸೆಲ್ಪಿ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ
WhatsApp Group Join Now
Telegram Group Join Now

ಬೆಳಗಾವಿ : ಸಾಲಗಾರರ ಕಾಟಕ್ಕೆ ಬೇಸತ್ತು ಸೆಲ್ಪಿ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ.ರೇಖಾ ಸಮಗಾರ, ಭೀಮಾ ವಾಳಕೆ ಎಂಬುವವರಿಂದ ಸೆಕ್ಯೂರಿಟಿ ಗಾರ್ಡ್ ಅಪ್ಪಾಸಾಬ್ 50, 000 ಸಾಲ ಪಡೆದಿದ್ದರು.

ಸಾಲಗಾರರ ಕಿರುಕುಳ ತಾಳಲಾರದೇ ಮನನೊಂದು ಸೆಲ್ಪಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ತೆಗೆದುಕೊಂಡ 50 ಸಾವಿರ ಹಣಕ್ಕೆ ಲಕ್ಷಾಂತರ ರೂ.ಬಡ್ಡಿ ಪಾವತಿಸಿದ್ದರು ಎನ್ನಲಾಗಿದೆ. ಅಲ್ಲದೇ ಇನ್ನೂ ಹೆಚ್ಚಿನ ಬಡ್ಡಿ ನೀಡುವಂತೆ ಕಿರುಕುಳ ನೀಡಿದ್ದರಿಂದ ಮನನೊಂದು ಅಪ್ಪಾ ಸಾಬ್ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!