Ad imageAd image

ಇಂದು ಒಂದೇ ದಿನ ವಿವಿಧ ಜಿಲ್ಲೆಯಲ್ಲಿ ಐದು ಶವಗಳು ಪತ್ತೆ

Bharath Vaibhav
ಇಂದು ಒಂದೇ ದಿನ ವಿವಿಧ ಜಿಲ್ಲೆಯಲ್ಲಿ ಐದು ಶವಗಳು ಪತ್ತೆ
CRIME
WhatsApp Group Join Now
Telegram Group Join Now

ಬೆಂಗಳೂರು : ಕಳೆದ ಒಂದು ತಿಂಗಳ ಒಳಗೆ ನಡೆದ ಮೂರು ಜನ ಹೆಣ್ಣುಮಕ್ಕಳ ಕೊಲೆ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆ ಉದ್ಭವಿಸುವಂತೆ ಮಾಡಿವೆ.

ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ, ರವಿವಾರ ಒಂದೇ ವಿವಿಧ ಜಿಲ್ಲೆಯಲ್ಲಿ ದಿನ ಐದು ಶವಗಳು ಪತ್ತೆಯಾಗಿದ್ದು, ಆತಂಕ್ಕೆ ಕಾರಣವಾಗಿದೆ. ಇಂದು ಬೆಂಗಳೂರು, ಮೈಸೂರು, ಬಾಗಲಕೋಟೆ, ಉಡುಪಿ ಜಿಲ್ಲೆಗಳಲ್ಲಿ ಶವ ಪತ್ತೆಯಾಗಿದೆ.

ಬೆಂಗಳೂರಿನ ಸಿಟಿ ಮಾರ್ಕೆಟ್ ಕಾಂಪ್ಲೆಕ್ಸ್ ಹಿಂಭಾಗದಲ್ಲಿ 35 ವರ್ಷ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತುಹಾಕಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯನಗರದ ಹೂವಿನಹಡಗಲಿ ತಾಲೂಕಿನ ಕುರುವತ್ತಿ ಗ್ರಾಮ ಬಳಿಯ ತುಂಗಭದ್ರಾ ನದಿಯಲ್ಲಿ 43 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಹಿರೇಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೈಸೂರು ನಗರದ ಹೊರವಲಯದ ಸಿಗ್ನಲ್ ಬಳಿಯ ಮೋರಿಯಲ್ಲಿ ಪತ್ತೆ ಅಂಗಾತ ಮಲಗಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ನೀಡಿದ್ದಾರೆ.

ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ವಿದ್ಯುತ್​ ತಂತಿ ತುಳಿದು ವ್ಯಕ್ತಿ ಮೃತಪಟ್ಟಿದ್ದಾರೆ. ಇರ್ಷಾದ್ (56) ಮೃತ ದುರ್ದೈವಿ. ವಿದ್ಯುತ್​ ತಂತಿ ಗಾಳಿ ಮಳೆಯಿಂದ ತುಂಡಾಗಿ ಬಿದ್ದಿತ್ತು. ಇದನ್ನು ತಿಳಯದೆ ವಿದ್ಯುತ್​ ತಂತಿ ತುಳಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆ ತಾಲೂಕಿನ ಬೇವೂರು ಗ್ರಾಮದಲ್ಲಿ ಹಾವು ಕಡಿದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶೈನಜಾ ಮುಜಾವರ್​ (24) ಮೃತ ದುರ್ದೈವಿ. ಶೈನಜಾ ಮುಜಾವರ್​ ತೋಟದ ಮನೆಯಲ್ಲಿ ಮಲಗಿದ್ದಾಗ ಹಾವು ಕಡಿದಿದೆ. ಬಾಗಲಕೋಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!