ದುಬೈ: ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವೆ ಇಂದು ಇಲ್ಲಿ ಏಶಿಯಾ ಕಪ್ ಪಂದ್ಯಾವಳಿಯ ಫೈನಲ್ ಪಂದ್ಯ ನಡೆಯಲಿದೆ.
ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ರಾತ್ರಿ 8 ಕ್ಕೆ ಪಂದ್ಯ ಆರಂಭವಾಗಲಿದೆ. ಭಾರತ ಲೀಗ್ ಹಾಗೂ ಸೂಪರ್-4 ರ ಹಂತದ ಎಲ್ಲ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಫೈನಲ್ ಗೆ ಏರಿದ್ದು, ಪಾಕಿಸ್ತಾನ ಸೂಪರ್-4 ರಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ತಂಡವನ್ನು ಸೋಲಿಸಿ ಫೈನಲ್ ತಲುಪಿದೆ.
ಪಂದ್ಯಾವಳಿಯ ಆರಂಭದಲ್ಲಿ ಕಳಪೆ ಪ್ರದರ್ಶನದಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಪಾಕಿಸ್ತಾನ ಪಂದ್ಯಾವಳಿ ಸಾಗಿದಂತೆ ತನ್ನ ಪ್ರದರ್ಶನದಲ್ಲಿ ಸುಧಾರಣೆ ಕಂಡಿದೆ. ಅಲ್ಲದೇ ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಮೂರನೇ ಪಂದ್ಯ ಆಡುತ್ತಿದ್ದು, ನಾಳಿನ ಫೈನಲ್ ಪಂದ್ಯವೂ ಕುತೂಹಲ ಕೆರಳಿಸಿದೆ. ಅಲ್ಲದೇ ಭಾರತ ತಂಡಕ್ಕೆ ಗಾಯಾಳುಗಳ ಸಮಸ್ಯೆಯೂ ಫೈನಲ್ ನಲ್ಲಿ ಕಾಡುತ್ತಿದೆ.




