Ad imageAd image

ಇಂದು ವಿಶ್ವದೆಲ್ಲೆಡೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Bharath Vaibhav
WhatsApp Group Join Now
Telegram Group Join Now

ನವದೆಹಲಿ: ಇಂದು ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಹರಿದ್ವಾರದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಬಾಬಾ ರಾಮದೇವ್ ನೇತೃತ್ವದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ನಡೆಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.2015ರಲ್ಲಿ ಆರಂಭವಾದ ಯೋಗ ದಿನಾಚರಣೆಯನ್ನು ಪ್ರತಿ ವರ್ಷ ಜೂನ್ 21ರಂದು ಆಚರಿಸಲಾಗುತ್ತಿದೆ.

ಇಂದು ಬೆಳಗಿನ ಜಾವ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ಯೋಗ ದಿನಾಚರಣೆಯ ಸಾಮೂಹಿಕ ಯೋಗ ಕಾರ್ಯಕ್ರಮದಲ್ಲಿ ಬಾಬಾ ರಾಮದೇವ್ ಭಾಗಿಯಾಗಿದ್ದಾರೆ. ಯೋಗ ಮಾಡುವುದರಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ.

ಕ್ಯಾನ್ಸರ್, ಹೃದಯಕ್ಕೆ ಸಂಬಂಧಿಸಿದ ರೋಗಗಳ ನಿವಾರಣೆಯಾಗಲಿದೆ. ಸೂರ್ಯ ನಮಸ್ಕಾರ ಮಾಡುವುದರಿಂದ ಅನೇಕ ರೋಗಗಳು ನಿವಾರಣೆಯಾಗುತ್ತದೆ. ನಿತ್ಯ ಯೋಗಾಸನ ಮಾಡುವುದರಿಂದ ಅನೇಕ ರೋಗಗಳಿಗೆ ಮುಕ್ತಿ ಸಿಗುತ್ತದೆ.

ಸಕ್ಕರೆ ಕಾಯಿಲೆ ಸೇರಿದಂತೆ ಅನೇಕ ರೋಗಗಳು ನಿವಾರಣೆಯಾಗುತ್ತದೆ. ಗರುಡಾಸನದಿಂದ ಮನಸ್ಸಲ್ಲಿ ಏಕಾಗ್ರತೆ ಮೂಡುತ್ತದೆ. ಸ್ವಸ್ಥ ಆರೋಗ್ಯ ಶಾಂತಿ ನೆಮ್ಮದಿ ಜೀವನಕ್ಕೆ ಯೋಗ ಅವಶ್ಯಕತೆ ಇದೆ ಎಂದು ರಾಮ್ ದೇವ್ ಅವರು ಹೇಳಿದ್ದಾರೆ

ಬಳ್ಳಾರಿಯಲ್ಲಿ ನಡೆಯುವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ವಿದ್ಯಾನಗರ ಟೌನ್ ಶಿಪ್ ನಲ್ಲಿ ನಡೆಯಲಿರುವ ಯೋಗ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖ್ಯಾತ ಯೋಗಾಪಟುಗಳಾದ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

 

WhatsApp Group Join Now
Telegram Group Join Now
Share This Article
error: Content is protected !!