Join The Telegram | Join The WhatsApp |
ತುಮಕೂರು: ಇಂದು ಶಿವಕುಮಾರ ಸ್ವಾಮೀಜಿಗಳ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು.
ಮಠದಲ್ಲಿ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ವಿಶೇಷ ಪೂಜಾ ಕಾರ್ಯ ನಡೆಯಲಿದೆ.ಬೆಳಿಗ್ಗೆ 8 ಗಂಟೆಗೆ ಬೆಳ್ಳಿ ರಥದಲ್ಲಿ ಪೂಜ್ಯರ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು, ವಿವಿಧ ಮಠಗಳ ಮಠಾಧೀಶರು, ಕಲಾತಂಡಗಳು ಭಾಗಿಯಾಗಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು ಭಾಗಿಯಾಗಲಿದ್ದಾರೆ. ಪುಣ್ಯಸ್ಮರಣೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಲಿದ್ದಾರೆ.
Join The Telegram | Join The WhatsApp |