ಬೆಂಗಳೂರು : ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ (ವಿಎಓ) ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಲು ಮೇ 18 ಕಡೆಯ ದಿನವಾಗಿದ್ದು, ಶುಲ್ಕ ಪಾವತಿಗೆ ಮೇ 22 ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು http://kea.kar.nic.in ನೋಡಲು ಸೂಚಿಸಿದೆ.
ಒಟ್ಟು 1000 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಯು ಎರಡನೇ ಪಿಯುಸಿ ಅಥವಾ ತತ್ಸಮಾನತೆಯ ಶೈಕ್ಷಣಿಕ ವಿದ್ಯಾರ್ಹತೆಯನ್ನು ಪಡೆದಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 21,400-42,000 ನಿಗದಿಯಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್ಸೈಟ್ https://kea.kar.nic.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ದಿನಾಂಕ 05-04-2024ರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪುನರಾರಂಭಗೊಂಡಿತ್ತು.
ದಿನಾಂಕ 04-05-2024 ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ದಿನಾಂಕ 07-05-2024 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿತ್ತು. ಆದ್ರೇ ಈ ದಿನಾಂಕವನ್ನು ವಿಸ್ತರಿಸಲಾಗಿದೆ. ಮೇ 18ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಶುಲ್ಕ ಪಾವತಿಗೆ ಮೇ 22ರವರೆಗೆ ಅವಕಾಶ ನೀಡಲಾಗಿದೆ.