ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ರೈಲ್ವೆ ಇಲಾಖೆ, ಕೇಂದ್ರ ಲೋಕಸೇವಾ ಆಯೋಗವು ನಡೆಸುತ್ತಿರುವ ವಿವಿಧ ಹುದ್ದೆಗಳ ನೇಮಕಾತಿಗಳಿಗೆ ಅರ್ಜಿ ಸಲ್ಲಿವುದಕ್ಕೆ ಇಂದು ಕೊನೆ ದಿನಾಂಕವಾಗಿದ್ದು, ಈ ನಿಟ್ಟಿನಲ್ಲಿ ಈಗ ನಾವು ನಿಮಗಾಗಿ ಮಹತ್ವದ ಮಾಹಿತಿಯನ್ನು ನೀಡುತ್ತಿದ್ದೇವೆ.
ಕೂಡಲೇ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ನಿಟ್ಟಿನಲ್ಲಿ ನಿಮಗಾಗಿ ಇಲ್ಲಿದೆ ಮಾಹಿತಿ.
ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದಾದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ -247 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ನಡುವೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 15, 2024 ರ ರಾತ್ರಿ 23-೦೦ ಗಂಟೆವರೆಗೆ ಅವಕಾಶ ಇರುತ್ತದೆ.
ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚಿಸಿ ಅರ್ಜಿ ಆಹ್ವಾನಿಸಿದ್ದು, ಈ ಹುದ್ದೆಗಳಿಗೆ ಮೇ 15, 2024 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.
ಕಲ್ಯಾಣ ಕರ್ನಾಟಕ ಭಾಗಕ್ಕೆ 97 ಪಿಡಿಒ ಹುದ್ದೆಗಳು ಹಾಗೂ ಉಳಿಕೆ ಮೂಲ ವೃಂದದಲ್ಲಿ 150 ಪಿಡಿಒ ಹುದ್ದೆಗಳಿಗೆ ಕೆಪಿಎಸ್‌ಸಿಯಿಂದ ನೇಮಕಾತಿ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಮೇ 15 ಕಡೆಯ ದಿನಾಂಕವಾಗಿದೆ.