ಬೆಂಗಳೂರು: ಅಂದು ಗೋಡ್ಸೆಯಿಂದ ಗಾಂಧಿ ಹತ್ಯೆ: ಇಂದು ಗೋಡ್ಸೆವಾದಿಗಳಿಂದ ಗಾಂಧಿವಾದದ ಹತ್ಯೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜಗತ್ತಿಗೆ ಅಹಿಂಸೆಯ ಸಂದೇಶವನ್ನು ಪ್ರಬಲವಾಗಿ ನೀಡಿದ್ದವರು ಮಹಾತ್ಮ ಗಾಂಧಿ.ಗಾಂಧಿ ಎಂದಿಗೂ ಅವರ ಕೈಲಿದ್ದ ಕೋಲನ್ನು ಎತ್ತಿ ಹಲ್ಲೆಗೆ ಬಳಸಿದವರಲ್ಲ, ಗಾಂಧಿ ಎಂದಿಗೂ ಸುಳ್ಳಿನ ಮಾರ್ಗ ತೋರಿದವರಲ್ಲ, ಆದರೆ, ಮಹಾತ್ಮನ ಮಹತ್ವ ಅರಿಯದ ಆರ್ ಎಸ್ ಎಸ್ ಹಾಗು ಬಿಜೆಪಿ ಮಹಾತ್ಮ ಗಾಂಧಿಯವರನ್ನು ಹಿಂಸೆಯ ಪ್ರತಿಪಾದಕರನ್ನಾಗಿ ಚಿತ್ರಿಸಿ ಜಾಹೀರಾತು ನೀಡುವ ಮೂಲಕ ಮತ್ತೊಮ್ಮೆ ಮಹಾತ್ಮ ಗಾಂಧೀಜಿಗೆ ಅವಮಾನಿಸಿದೆ ಎಂದಿದ್ದಾರೆ.
ಮಹಾತ್ಮ ಗಾಂಧಿಯವರನ್ನು ದೈಹಿಕವಾಗಿ ಮುಗಿಸಿಹಾಕಿದ್ದಲ್ಲದೆ ಈಗ ಅವರ ಸಿದ್ದಾಂತವನ್ನೂ ಮುಗಿಸಿಹಾಕುವ ಕೆಲಸಕ್ಕೆ ಕೈ ಹಾಕಿರುವ ಬಿಜೆಪಿಯಿಂದ ಗಾಂಧೀಜಿಯನ್ನು ಮತ್ತು ಅವರ ತತ್ವಗಳನ್ನು ನಾವು ರಕ್ಷಿಸಬೇಕಿದೆ ಎಂದು ಹೇಳಿದ್ದಾರೆ.




