ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಅಧಿಕಾರಿಗಳು ಮತ ಎಣಿಕೆ ಕೇಂದ್ರದತ್ತ ಆಗಮಿಸಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಸ್ಟ್ರಾಂಗ್ ರೂಮ್ ಓಪನ್ ಆಗಲಿದೆ.
ಮತಎಣಿಕೆ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.rಎಣಿಕೆ ಟ್ರಯಲ್ ರನ್ ಕೂಡ ಮುಗಿದಿದ್ದು, ಸ್ಟ್ರಾಂಗ್ ರೂಮ್ ಓಪನ್ ಬಳಿಕ ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದೆ.
ಬೆಳಿಗ್ಗೆ 8 ಗಂಟೆಗೆ ಎಣಿಕೆ ಆರಂಭವಾಗಲಿದೆ. 5,000 ತರಬೇತಿ ಪಡೆದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಶೇ. 60.42 ರಷ್ಟು ಮತದಾನ ದಾಖಲಾಗಿತ್ತು.
ಆಡಳಿತರೂಢ ಎಎಪಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಯುವ ಕನಸು ಕಾಣುತ್ತಿದ್ದು, ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದೆ. ಬರೋಬ್ಬರಿ 27 ವರ್ಷಗಳ ಕಾಲ ಅಧಿಕಾರದಿಂದ ದೂರ ಉಳಿದಿದ್ದ ಬಿಜೆಪಿಯೂ ಈ ಬಾರೀ ಅಧಿಕಾರದ ಗದ್ದುಗೆ ಏರಲು ಹವಣಿಸುತ್ತಿದ್ದರೆ, ಕೈ ಪಡೆಯೂ ಸಹ ಜಯ ನಮ್ಮದೆ ಎನ್ನುವ ಲೆಕ್ಕಾಚಾರವನ್ನ ಹಾಕಿಕೊಂಡಿದೆ.
13ಕ್ಕೂ ಹೆಚ್ಚು ಮತಗಟ್ಟೆ ಸಮೀಕ್ಷೆಗಳಲ್ಲಿ ಬಿಜೆಪಿ 35 ರಿಂದ 60 ಸ್ಥಾನಗಳವರೆಗೆ ಗೆಲ್ಲಬಹುದು ಎಂದು ಅಂದಾಜು ಮಾಡಲಾಗಿದೆ. ಹೀಗಾಗಿ ಈ ಬಾರಿ ಬಿಜೆಪಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗಿದೆ.
ದಿಲ್ಲಿಯಲ್ಲಿ 70 ವಿಧಾನಸಭಾ ಕ್ಷೇತ್ರಗಳಿದ್ದು, 36 ಅಥವಾ ಅದಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಜಯ ಗಳಿಸುವ ಪಕ್ಷ ಅಧಿಕಾರಕ್ಕೇರಲಿದೆ.