ಬೆಂಗಳೂರು : ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಭವಿಷ್ಯ ಇಂದು ನಿರ್ಧಾರವಾಗಲಿದೆ.
2022ರ ಸೆಪ್ಟೆಂಬರ್ 1ರಿಂದ ಜೈಲಿನಲ್ಲಿರುವ ಮುರುಘಾಶ್ರೀ ಜಾಮೀನು ಅರ್ಜಿಯನ್ನು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಅರ್ಜಿ ತಿರಸ್ಕರಿಸಿತು.
ಹೀಗಾಗಿ ಮುರುಘಾಶ್ರೀ ಪರ ವಕೀಲರು ಹೈಕೋರ್ಟ್ ಮೆಟ್ಟಲೇರಿದ್ದು, ಇಂದು ಶ್ರೀಗಳ ಭವಿಷ್ಯ ನಿರ್ಧಾರವಾಗಲಿದೆ. ಕರ್ನಾಟಕ ಹೈಕೋರ್ಟ್ ನಲ್ಲಿಂದು ಮುರುಘಾಮಠದ ಮುರುಘಾಶ್ರೀ ಜಾಮೀನು ಅರ್ಜಿ ಬಗ್ಗೆ ಆದೇಶ ಪ್ರಕಟಸಲಿದೆ. ಹೀಗಾಗಿ ಶ್ರೀಗಳಿಗೆ ಜೈಲೆ ಗತಿನಾ ಅಥವಾ ಬೇಲಾ ಎಂದು ಭಕ್ತರ ಚಿತ್ತ ಹೈಕೋರ್ಟ್ನತ್ತೆ ನೆಟ್ಟಿದೆ.