Ad imageAd image

ಇಂದು 2500 ಕಿ.ಮೀ. ಉದ್ದದ ಮಾನವ ಸರಪಳಿ : ವಿಶ್ವ ದಾಖಲೆ ಪಕ್ಕಾ 

Bharath Vaibhav
ಇಂದು 2500 ಕಿ.ಮೀ. ಉದ್ದದ ಮಾನವ ಸರಪಳಿ : ವಿಶ್ವ ದಾಖಲೆ ಪಕ್ಕಾ 
WhatsApp Group Join Now
Telegram Group Join Now

ಬೆಂಗಳೂರು : ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ನಿರ್ಮಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಸರಕಾರ ಮುಂದಾಗಿದೆ.

ರಾಜ್ಯದ ಗಡಿ ಜಿಲ್ಲೆಗಳಾದ ಬೀದರ್ ಜಿಲ್ಲೆಯಿಂದ ಚಾಮರಾಜನಗರದ ವರೆಗೂ ಸಮಾಜದ ಎಲ್ಲಾ ವರ್ಗದ ಜನರೂ ಸೇರಿದಂತೆ ಸುಮಾರು 25 ಲಕ್ಷ ಮಂದಿ ಕೈಕೈ ಹಿಡಿದು ರಾಜ್ಯದುದ್ದಕ್ಕೂ ವಿಶ್ವದ ಬೃಹತ್ ಮಾನವ ಸರಪಳಿ ನಿರ್ಮಿಸಲಿದ್ದಾರೆ.

ಇದೇವೇಳೆ ಸಂವಿಧಾನದ ಮಹತ್ವ ಸಾರುವ ಪ್ರಸ್ತಾವನೆ ಓದುವುದು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಯ ಹೊಣೆಗಾರಿಕೆ ನೆನಪಿಸುವ ಜಾಗೃತಿ ಮೂಡಿಸಲಿದ್ದಾರೆ. ಹಾಗೆಯೇ, ಸುತ್ತಮುತ್ತ ಪ್ರದೇಶದಲ್ಲಿ ಗಿಡಗಳನ್ನೂ ನೆಡಲಿದ್ದಾರೆ. ಈ ಮೂಲಕ ಅಂದು ರಾಜ್ಯಾದ್ಯಂತ 10ಲಕ್ಷ ಗಿಡಗಳನ್ನು ಹಾಕಲಾಗುತ್ತದೆ.

ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ರಾಜ್ಯ 32 ಇಲಾಖೆಗಳ ಸುಮಾರು 8 ಲಕ್ಷಕ್ಕೂ ಅಧಿಕ ಸಿಬ್ಬಂದಿ ಇಡೀ ಕಾರ್ಯಕ್ರಮಕ್ಕಾಗಿ ಶ್ರಮಿಸುತ್ತಿದ್ದು, ಇಲಾಖೆ ಸಚಿವರಾದ ಡಾ. ಹೆಚ್. ಸಿ. ಮಹಾದೇವಪ್ಪ ಹೆಚ್ಚಿನ ಆಸಕ್ತಿ ವಹಿಸಿ ಸಿದ್ಧತೆಗಳನ್ನು ನಡೆಸಿದ್ದಾರೆ. ಈ ವಿನೂತನ ಮತ್ತು ಬೃಹತ್ ಕಾರ್ಯಕ್ರಮಕ್ಕೆ ಲಂಡನ್ ನ ವಿಶ್ವ ದಾಖಲೆ ಪರಿಶೀಲಿಸುವ ತಂಡ ಆಗಮಿಸಲಿದ್ದು, ಎಲ್ಲವೂ ದಾಖಲೆಗಳ ನಿಯಮದಂತಿರುವುದನ್ನು ವಿವಿಧ ಹಂತಗಳಲ್ಲಿ ಅಧ್ಯಯನ ಮಾಡಲಿದೆ.

ನಂತರ ಕಾರ್ಯಕ್ರಮ ದಾಖಲೆಗಳ ನಿಯಮಕ್ಕೆ ಒಪ್ಪುವಂತೆ ಇದ್ದರೆ ಕಾರ್ಯಕ್ರಮವನ್ನು ವಿಶ್ವ ದಾಖಲೆಗೆ ಸೇರಿಸಲಿದೆ. ಇದೆಲ್ಲದಕ್ಕೂ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರು ತಮ್ಮದೇ ರೀತಿಯಲ್ಲಿ ವಿಶೇಷ ವ್ಯವಸ್ಥೆ ಮಾಡಿದ್ದಾರೆ.

ಹಾಗೆಯೇ ಡ್ರೋನ್ ಚಿತ್ರೀಕರಣ ಹಾಗೂ ಪ್ರತಿ ಜಿಲ್ಲೆಯ ತಾಲೂಕುಗಳ ಮಾಹಿತಿಗಳು ಕ್ಷಣಕ್ಷಣದಲ್ಲಿ ಲಭ್ಯವಾಗಿ ಆಯೋಜಕರ ನಡುವೆ ಸಂಪೂರ್ಣ ಸಮನ್ವಯದೊಂದಿಗೆ ನಡೆಯುವಂತೆ ಮಾಡುವ ವಿಶೇಷ ಸುಧಾರಿತ ತಂತ್ರಜ್ಞಾನದ ಜಾಲವೊಂದರ ಸಿದ್ಧತೆ ನಡೆಸಿದ್ದಾರೆ.

ಈ ವಿಶೇಷ ಮಾನವ ಸರಪಳಿ ಪ್ರತಿ ಜಿಲ್ಲೆ, ತಾಲೂಕು ಹಾಗೂ ಪ್ರಮುಖ ಗ್ರಾಮಗಳಲ್ಲಿ ಹಾದು ಹೋಗುವ ಹೆದ್ದಾರಿಗಳಲ್ಲಿ ಹಾದು ಹೋಗಲಿದ್ದು, ಎಲ್ಲಾ ಹಳ್ಳಿಗಳಲ್ಲೂ ಇದೊಂದು ಹಬ್ಬದಂತೆ ಆಚರಿಸುವಂತೆ ಮಾಡಲು ಸರಕಾರ ಸಕಲ ರೀತಿಯಲ್ಲಿ ಸಿದ್ಧತೆ ನಡೆಸಿದೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!