ಬೆಂಗಳೂರು : ಸತತ ಮೂರು ವಾರಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಇರಾನ್ – ಅಮೆರಿಕ, ಇಸ್ರೇಲ್ ನಡುವಿನ ಯುದ್ಧವು ತಾರ್ಕಿಕ ಅಂತ್ಯ ಕಾಣುವ ಲಕ್ಷಣ ಕಾಣಿಸುತ್ತಿದೆ. ಯುದ್ಧಕ್ಕೆ 2 ಕದನ ವಿರಾಮ ಘೋಷಣೆ ಮಾಡುತ್ತಿದ್ದಂತೆಯೇ ಕಚ್ಚಾ ತೈಲದ ಬೆಲೆ ಭರ್ಜರಿ ಕುಸಿತ ಕಂಡಿದೆ.
ಅಲ್ಲದೆ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಾಗಿದೆ? ಎಂಬ ಬಗ್ಗೆ ಇಲ್ಲಿ ಮಾಹಿತಿ ಇದೆ.
ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಕಡಿಮೆಯಾಗಿ ಕದನ ವಿರಾಮದ ಬೆನ್ನಲ್ಲೆ, ಆಶ್ಚರ್ಯಕರ ಎಂಬಂತೆ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ದಿಢೀರ್ ಏರಿಕೆ ಕಂಡುಬಂದಿದೆ.
ಸಾಮಾನ್ಯವಾಗಿ ಯುದ್ಧದಂತಹ ಪರಿಸ್ಥಿತಿ ತಿಳಿಯಾದಾಗ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾದ ಚಿನ್ನದಿಂದ ಹಣವನ್ನು ಹೊರತೆಗೆದು ಶೇರು ಮಾರುಕಟ್ಟೆಗೆ ಹಾಕುತ್ತಾರೆ, ಇದರಿಂದ ಚಿನ್ನದ ಬೆಲೆ ಇಳಿಯಬೇಕಿತ್ತು. ಆದರೆ ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: ಏಪ್ರಿಲ್ 8 ರಂದು 24 ಕ್ಯಾರೆಟ್ ಚಿನ್ನದ ಬೆಲೆ ಭಾರೀ ಹೆಚ್ಚಳವಾಗಿದೆ. 24 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 15,382 ರೂ. ಆಗಿದೆ.
10 ಗ್ರಾಂ ಚಿನ್ನದ ಬೆಲೆಯು 1,53,820 ರೂ. ಆಗಿದೆ. ಏ.7ಕ್ಕೆ ಹೋಲಿಕೆ ಮಾಡಿದರೆ 24 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 398 ರೂ. ಹಾಗೂ 10 ಗ್ರಾಂಗೆ 3,980 ರೂ. ಏರಿಕೆಯಾಗಿದೆ.
ಇನ್ನು 22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಹೆಚ್ಚಳವಾಗಿದೆ. 22 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 14,100 ರೂ. ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,41,000 ರೂ. ಆಗಿದೆ. ಏ.7ಕ್ಕೆ ಹೋಲಿಕೆ ಮಾಡಿದರೆ 22 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆ 365 ರೂ. ಹಾಗೂ 10 ಗ್ರಾಂನ ಮೇಲೆ 3,650 ರೂ. ಹೆಚ್ಚಳವಾಗಿದೆ.
ಅದೇ ರೀತಿ 18 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 24 ಕ್ಯಾರೆಟ್ ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆಯಂತೆಯೇ 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಹೆಚ್ಚಳವಾಗಿದೆ.
18 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 11,537 ರೂ. ಹಾಗೂ 10 ಗ್ರಾಂನ ಮೇಲೆ 1,15,370 ರೂ. ಆಗಿದೆ. 18 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 299 ರೂ. ಹಾಗೂ 10 ಗ್ರಾಂನ ಮೇಲೆ 2,990 ರೂ. ಹೆಚ್ಚಳವಾಗಿದೆ.
1. ಜಾಗತಿಕ ಅನಿಶ್ಚಿತತೆ
ಯುದ್ಧದ ಭೀತಿ ಸಂಪೂರ್ಣವಾಗಿ ದೂರವಾಗದ ಹಿನ್ನೆಲೆಯಲ್ಲಿ, ಹೂಡಿಕೆದಾರರು ಇನ್ನೂ ಜಾಗರೂಕತೆಯಿಂದ ಇದ್ದಾರೆ. ಕದನ ವಿರಾಮದ ಸುದ್ದಿ ಬಂದರೂ, ಭವಿಷ್ಯದ ರಾಜಕೀಯ ಬೆಳವಣಿಗೆಗಳ ಮೇಲೆ ಕಣ್ಣಿಟ್ಟಿರುವ ಕಾರಣ ಬೇಡಿಕೆ ಹೆಚ್ಚಿದೆ.
2. ಡಾಲರ್ ಮೌಲ್ಯದ ಮೇಲೆ ಪ್ರಭಾವ
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಮೆರಿಕನ್ ಡಾಲರ್ ಮೌಲ್ಯದಲ್ಲಿ ಆಗುವ ಬದಲಾವಣೆಗಳು ನೇರವಾಗಿ ಚಿನ್ನದ ದರದ ಮೇಲೆ ಪರಿಣಾಮ ಬೀರುತ್ತವೆ. ಡಾಲರ್ ತುಸು ದುರ್ಬಲಗೊಂಡಾಗ ಚಿನ್ನದ ಬೆಲೆ ಏರುವ ಸಾಧ್ಯತೆ ಇರುತ್ತದೆ.
3. ಕೇಂದ್ರ ಬ್ಯಾಂಕುಗಳ ಖರೀದಿ
ವಿವಿಧ ದೇಶಗಳ ಕೇಂದ್ರ ಬ್ಯಾಂಕುಗಳು (Central Banks) ತಮ್ಮ ಮೀಸಲು ನಿಧಿಗಾಗಿ ದೊಡ್ಡ ಪ್ರಮಾಣದಲ್ಲಿ ಚಿನ್ನವನ್ನು ಖರೀದಿಸುತ್ತಿರುವುದು ಕೂಡ ಬೆಲೆ ಏರಿಕೆಗೆ ಒಂದು ಪ್ರಮುಖ ಕಾರಣ.




