Ad imageAd image

ಇಂದು ಒಂದೇ ದಿನ ಮೂವರು ಹೃದಯಘಾತದಿಂದ ಸಾವು 

Bharath Vaibhav
ಇಂದು ಒಂದೇ ದಿನ ಮೂವರು ಹೃದಯಘಾತದಿಂದ ಸಾವು 
WhatsApp Group Join Now
Telegram Group Join Now

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲಿ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಇಂದು ರಾಜ್ಯದಲ್ಲಿ ಒಂದೇ ದಿನ ಮೂವರು ಹೃದಯಘಾತದಿಂದ ಸಾವನಪ್ಪಿದ್ದಾರೆ.

ಬೆಂಗಳೂರಲ್ಲಿ ಕ್ಯಾಬ್ ಚಾಲಕ, ಹಾಸನದಲ್ಲಿ ಬಾತ್ ರೂಂನಲ್ಲಿ ಕುಸಿದುಬಿದ್ದು ಯುವತಿ ಸಾವನ್ನಪ್ಪಿದ್ದರೆ, ಕೊಡಗಿನಲ್ಲಿ ಅರಣ್ಯ ಅಧಿಕಾರಿ ಒಬ್ಬರು ಸಾವನ್ನಪ್ಪಿದ್ದಾರೆ.

ನಿಂತಲ್ಲೇ ಕ್ಯಾಬ್ ಚಾಲಕ ಕುಸಿದುಬಿದ್ದು ಸಾವು!

ಮೊದಲನೇ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಾಡನೂರಿನ ಕೆ.ಆರ್ ಅಭಿಷೇಕ್ ಎನ್ನುವ ಯುವಕ ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ ಇಂದು ಬಸವೇಶ್ವರನಗರದಲ್ಲಿ ನಿಂತಲ್ಲಿಯೇ ಕುಸಿದು ಬಿದ್ದು ಅಭಿಷೇಕ್ ಸಾವನಪ್ಪಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸೇರಿಸಲು ಪ್ರಯತ್ನಿಸಿದರೂ ಸಹ ಮಾರ್ಗ ಮಧ್ಯದಲ್ಲಿ ಅಭಿಷೇಕ್ ಉಸಿರು ಚೆಲ್ಲಿದ್ದಾನೆ.

ಬಾತ್ ರೂಂನಲ್ಲೆ ಕುಸಿದುಬಿದ್ದು ಯುವತಿ ಸಾವು!

ಇನ್ನು ಹಾಸನದಲ್ಲಿ ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು.

ಬಾತ್‌ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾತ್‌ರೂಂ ಬಾಗಿಲು ಒಡೆದು ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟೊತ್ತಿಗಾಗಲೇ ಸಂಧ್ಯಾ ಉಸಿರು ಚೆಲ್ಲಿದ್ದಳು.

ಅರಣ್ಯಾಧಿಕಾರಿ ಸಾವು!

ಇನ್ನು ಕೊಡಗಿನಲ್ಲಿ ಅರಣ್ಯಾಧಿಕಾರಿ ದಿನೇಶ್ ಎಂಬುವವರು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಕುಶಾಲನಗರದ ಉಪ ವಲಯ ಅರಣ್ಯಾಧಿಕಾರಿಯಾಗಿ ದಿನೇಶ್ ಅವರು ಸೇವೆ ಸಲ್ಲಿಸುತ್ತಿದ್ದರು.

ಆದರೆ ಇಂದು ಹಠಾತ್ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಇಂದು ಒಂದೇ ದಿನ ರಾಜ್ಯದಲ್ಲಿ ಹೃದಯಾಘಾತದಿಂದ ಮೂವರು ಸಾವನ್ನಪ್ಪಿರುವುದು ಜನರನ್ನು ಆತಂಕಕ್ಕೆ ದೂಡಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!