ನವದೆಹಲಿ: ಕೇಂದ್ರ ಸರ್ಕಾರ ಶುಕ್ರವಾರ ಡಾ. ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಾದ ಏಪ್ರಿಲ್ 14 ಅನ್ನು ಸಾರ್ವಜನಿಕ ರಜಾದಿನವೆಂದು ಘೋಷಿಸಿದೆ.
ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಈ ಘೋಷಣೆ ಮಾಡಿದ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, “ಸಂವಿಧಾನದ ಶಿಲ್ಪಿ, ಸಮಾಜದಲ್ಲಿ ಸಮಾನತೆಯ ಹೊಸ ಯುಗವನ್ನು ಸ್ಥಾಪಿಸಿದವರು, ನಮ್ಮ ಗೌರವಾನ್ವಿತ ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಜಿ ಅವರ ಜನ್ಮ ದಿನಾಚರಣೆಯಂದು ಈಗ ಸಾರ್ವಜನಿಕ ರಜಾದಿನವನ್ನು ಆಚರಿಸಲಾಗುವುದು” ಎಂದು ಹೇಳಿದ್ದಾರ
“ಈ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ, ಬಾಬಾ ಸಾಹೇಬ್ ಅವರ ನಿಷ್ಠಾವಂತ ಅನುಯಾಯಿ, ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಭಾವನೆಗಳನ್ನು ಗೌರವಿಸಿದ್ದಾರೆ” ಎಂದು ಶೇಖಾವತ್ ಹೇಳಿದರು.