Ad imageAd image

364 ಭೂಮಾಪಕರ ಹುದ್ದೆಗಳ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ 

Bharath Vaibhav
364 ಭೂಮಾಪಕರ ಹುದ್ದೆಗಳ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ 
vidhan soudha
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತ 364 ಭೂಮಾಪಕರ ಹುದ್ದೆಗಳ ಭರ್ತಿಗೆ ಕೆಪಿಎಸ್ಸಿಯಿಂದ ಅಧಿಸೂಚನೆ ಹೊರಡಿಸಲಾಗಿದೆ.

ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತ 364 ಭೂಮಾಪಕರ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.

ಹುದ್ದೆಗಳ ವಿವರ

ಉಳಿಕೆ ಮೂಲ ವೃಂದ – 264 ಹುದ್ದೆಗಳು

ಹೈದರಾಬಾದ್-ಕರ್ನಾಟಕ ಸ್ಥಳೀಯ ವೃಂದ – 100 ಹುದ್ದೆಗಳು

ವೇತನ ಶ್ರೇಣಿ – ರೂ.23,500 ರಿಂದ ರೂ.47,650

ಪ್ರಮುಖ ದಿನಾಂಕಗಳು

ಭೂಮಾಪಕರ 100 ಹುದ್ದೆಗಳಿಗೆ ದಿನಾಂಕ 11-03-2024ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2024 ಆಗಿದೆ. ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷೆಯು ಕನ್ನಡ ಭಾಷಾ ಪರೀಕ್ಷೆ ದಿನಾಂಕ 06-07-2024, ಸ್ಪರ್ಧಾತ್ಮಕ ಪರೀಕ್ಷೆಯು ದಿನಾಂಕ 07-07-2024ರಂದು ನಡೆಸಲು ನಿಗದಿ ಪಡಿಸಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕಾನೂನು ರೀತಿ ಸ್ಥಾಪಿಸಲಾದಂತ ಯಾವುದೇ ವಿವಿಯಿಂದ ಬಿಇ (ಸಿವಿಲ್) ಅಥವಾ ಬಿಟೆಕ್(ಸಿವಿಲ್) ಅಥವಾ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋದಲ್ಲಿ ಉತ್ತೀರ್ಣರಾಗಿರಬೇಕು.

ಪಿಯುಸಿ ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಜರುಗಿಸುವ 12ನೇ ತರಗತಿ ಇವುಗಳಲ್ಲಿ ವಿಜ್ಞಾನ ವಿಷಯದಲ್ಲಿ ಪಡೆದು ಗಮಿತ ವಿಷಯದಲ್ಲಿ ಶೇ.60ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಲ್ಲದೇ ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡರ್ ಅಂಡ್ ಸಿಟಿ ಸರ್ವೆಯ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಕೆ

https://kpsconline.karnataka.gov.in ಗೆ ಭೇಟಿ ನೀಡಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ವಯೋಮಿತಿ

ಸಾಮಾನ್ಯ ವರ್ಗದವರಿಗೆ 35 ವರ್ಷಗಳು. ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷಗಳು. ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಅರ್ಜಿ ಶುಲ್ಕ

ಸಾಮಾನ್ಯ ವರ್ಗದವರಿಗೆ ರೂ.600. ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ.300. ಮಾಜಿ ಸೈನಿಕರಿಗೆ ರೂ.50. ಎಸ್ಸಿ, ಎಸ್ಟಿ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

 

 

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!