Ad imageAd image

16 ಜನ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

Bharath Vaibhav
16 ಜನ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ಒಂದೇ ದಿನದಲ್ಲಿ 16 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ..

ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಜಾನಕಿ ಕೆ.ಎಂ. ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಹಾಸನ ಜಿಲ್ಲಾಧಿಕಾರಿಯಾಗಿದ್ದ ಸತ್ಯಭಾಮಾ ಅವರನ್ನು ಸಮಗ್ರ ಶಿಕ್ಷಣ ಅಭಿಯಾನ ರಾಜ್ಯ ಯೋಜನಾ ನಿರ್ದೇಶಕಿಯಾಗಿ ವರ್ಗಾಯಿಸಲಾಗಿದೆ.

ಇನ್ನು ಬೆಂಗಳೂರು ನಗರ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಲತಾ ಕುಮಾರಿ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ಆರ್‌ಡಿಪಿಆರ್‌ನ ಇ-ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ ಟಿಕೆ ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಬಿಬಿಎಂಪಿಯ ವಿಶೇಷ ಆಯುಕ್ತರಾಗಿದ್ದ ಅವಿನಾಶ್ ಮೆನನ್ ರಾಜೇಂದ್ರ ಅವರು ರಾಷ್ಟ್ರೀಯ ಆರೋಗ್ಯ ಮಿಷನ್ ಮತ್ತು ಆರೋಗ್ಯ ನಿರ್ದೇಶನಾಲಯದ ಮಿಷನ್ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಘಲನ್ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಐಜಿಯಾಗಿ ವರ್ಗಾವಣೆ ಮಾಡಲಾಗಿದೆ.

ಕೊಪ್ಪಳ ಜಿಲ್ಲಾಧಿಕಾರಿಯಾಗಿದ್ದ ನಳಿನಿ ಅತುಲ್- ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿಯಾಗಿ ಹಾಗು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದ ದರ್ಶನ್ ಹೆಚ್ ವಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ದಾವಣಗೆರೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಸುರೇಶ್ ಬಿ ಇಟ್ನಾಳ್ ಅವರನ್ನು ಕೊಪ್ಪಳ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಗರಿಮಾ ಪನ್ವರ್ ಅವರನ್ನು ನೇಮಕ ಮಾಡಲಾಗಿದೆ.

ಸ್ಮಾರ್ಟ್ ಗವರ್ನೆನ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ರಾಹುಲ್ ರತ್ನಂ ಪಾಂಡೆ ಅವರನ್ನು ನೇಮಕ ಹಾಗೆಯೇ ಮಧ್ಯಾಹ್ನ ಬಿಸಿ ಊಟದ ಸಾರ್ವಜನಿಕ ಶಿಕ್ಷಣ ನಿರ್ದೇಶಕರಾಗಿ ಪ್ರಕಾಶ್ ಜಿ ಟಿ ನಿಟ್ಟಾಲಿ ಅವರನ್ನು ವರ್ಗಾಯಿಸಲಾಗಿದೆ.

ದಾವಣಗೆರೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗೆಟ್ಟಿ ಮಹಾದೇವ ವಿಠಲ್ ರಾವ್ ಅವರನ್ನು ನೇಮಕ ಮಾಡಲಾಗಿದ್ದರೆ, ಕೊಪ್ಪಳ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಣಿತ ನೇಗಿ ಅವರನ್ನು ವರ್ಗಾಯಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!