ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಶಾಕ್ ನೀಡಿದೆ. 2026ರ ಜನವರಿ 1ರಿಂದ ಮುಂದಿನ ಆರು ತಿಂಗಳ ಅವಧಿಗೆ ಯಾವುದೇ ರೀತಿಯ ಮುಷ್ಕರ ನಡೆಸದಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಈ ಹಿಂದೆ ಜಾರಿಯಲ್ಲಿದ್ದ ಮುಷ್ಕರ ನಿಷೇಧ ಆದೇಶವು 2025ರ ಡಿಸೆಂಬರ್ 31ರಂದು ಮುಕ್ತಾಯಗೊಂಡಿದ್ದ ಹಿನ್ನೆಲೆ, ಇದೀಗ ಮತ್ತೆ ಹೊಸ ಅಧಿಸೂಚನೆ ಹೊರಡಿಸಿ ಮುಷ್ಕರವನ್ನು ನಿರ್ಬಂಧಿಸಲಾಗಿದೆ.
ಯಾವುದೇ ಸಂದರ್ಭದಲ್ಲಿಯೂ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಬಾರದು ಎಂದು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ.
ಸರ್ಕಾರದ ಆದೇಶವನ್ನು ಉಲ್ಲಂಘಿಸಿದಲ್ಲಿ ಎಸ್ಮಾ ಜಾರಿಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಆದೇಶದ ಪ್ರತಿಯನ್ನು ಸಾರಿಗೆ ಸಂಸ್ಥೆಗಳ ಎಲ್ಲಾ ಘಟಕಗಳು ಹಾಗೂ ನೌಕರರ ಗಮನಕ್ಕೆ ತರುವಂತೆ ಸರ್ಕಾರ ನಿರ್ದೇಶನ ನೀಡಿದೆ.




