ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವಿನ ಕದನ ವಿರಾಮದ ಕುರಿತು ಮತ್ತೆ ತಗಾದೆ ತೆಗೆದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ 26 ನಾಗರೀಕರು ಪ್ರಾಣ ಕಳೆದುಕೊಂಡರು.ಆದ್ರೆ ಟ್ರಂಪ್ ಹೇಳಿದ ಕೂಡಲೇ ಮೋದಿ ಕದನ ವಿರಾಮಕ್ಕೆ ಆದೇಶ ನೀಡಿದ್ರು ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಯಾವುದೇ ಹಂತದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ವಿರೋಧಿಸಿಲ್ಲ ಅಥವಾ ಕದನ ವಿರಾಮದ ಒಪ್ಪಂದದಲ್ಲಿ ಅಮೆರಿಕದ ಪಾತ್ರವಿಲ್ಲ ಎಂದು ಹೇಳಿಲ್ಲ. ನಾನೇ ಮಧ್ಯಸ್ಥಿಕೆ ವಹಿಸಿ ಭಾರತ ಪಾಕ್ ಮದುವೆ ಕದನ ವಿರಾಮ ಜಾರಿಯಾಗುವಂತೆ ಮಾಡಿದೆ ಎಂದು ಟ್ರಂಪ್ ಸುಮಾರು 16 ಬಾರಿ ಹೇಳಿಕೊಂಡಿದ್ದಾರೆ. ಆದ್ರೆ ಮೋದಿ ಮಾತ್ರ ತುಟಕ್ ಪಿಟಕ್ ಅಂದಿಲ್ಲ ಯಾಕೆ ಎಂದು ಖರ್ಗೆ ಪ್ರಶ್ನಿಸಿದ್ದಾರೆ.
ಕೆನಡಾ ಭೇಟಿ ಸಂದರ್ಭದಲ್ಲಿ ಮಾತ್ರ ಮೋದಿ ಕೇವಲ ಎರಡು ಮಾತನಾಡಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ವಿವಾದದಲ್ಲಿ ಮೂರನೆಯವರ ಹಸ್ತಕ್ಷೇಪ ಸಹಿಸುವುದಿಲ್ಲ ಎಂದು ಗಾಳಿಯಲ್ಲಿ ಗುಂಡು ಹೊಡೆದಂತೆ ಹೇಳಿದ್ದಾರೆ.
ಇದನ್ನು ಹೊರತುಪಡಿಸಿ ಟ್ರಂಪ್ ಹೇಳಿಕೆಯನ್ನು ನಿರಾಕರಿಸುವ ಧೈರ್ಯವನ್ನು ಮೋದಿ ಇದುವರೆಗೂ ತೋರಲಿಲ್ಲ, ಈ ಬಗ್ಗೆ ದೇಶದ ಜನರಿಗೆ ಮೋದಿ ಸ್ಪಷ್ಟನೆ ನೀಡಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ.