ಬೆಳಗಾವಿ : ಬೆಳಗಾವಿಯಲ್ಲಿ ಹಿಟ್ & ರನ್ ಪ್ರಕರಣದಲ್ಲಿ ಇಬ್ಬರು ಬೈಕ್ ಸಮಾರರು ದುರ್ಮರಣ ಹೊಂದಿದ್ದಾರೆ.ಈ ಒಂದು ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರುಗೋಡ ಗ್ರಾಮದ ಹೊರ ವಲಯದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.
ಬೈಕ್ ನಲ್ಲಿ ಇದ್ದಂತಹ ವಿಶಾಲ ಲಮಾಣಿ (20) ಅಪ್ಪು ಲಮಾಣಿ (23) ಸಾವನ್ನಪ್ಪಿದ್ದಾರೆ ಮೃತರು ಸವದತ್ತಿ ತಾಲೂಕಿನ ಹುಲಿಕೇರಿ ತಾಂಡಾದ ನಿವಾಸಿಗಳು ಎಂದು ತಿಳಿದುಬಂದಿದೆ. ಬೈಕ್ ಡಿಕ್ಕಿ ಹೊಡೆದು ಅಪರಿಚಿತ ವಾಹನ ಸಮೇತ ಚಾಲಕ ಪರಾಗಿದ್ದಾನೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಲಗಿ-ಮುರಗೋಡ ರಸ್ತೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಘಟನೆ ಕುರಿತಂತೆ ಮುರುಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




