Ad imageAd image

ಎರಡು ಪೂರ್ಣಗೊಳಿಸಿದ ಕಾಂಗ್ರೆಸ್ ಸರ್ಕಾರ : ಇಂದಿನಿಂದ ಸಾಧನಾ ಸಮಾವೇಶ 

Bharath Vaibhav
ಎರಡು ಪೂರ್ಣಗೊಳಿಸಿದ ಕಾಂಗ್ರೆಸ್ ಸರ್ಕಾರ : ಇಂದಿನಿಂದ ಸಾಧನಾ ಸಮಾವೇಶ 
siddaramaiah
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಸಾಧನೆ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಪ್ರತಿ ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ಕಾರ್ಯ ಚಟುವಟಿಕೆಗಳ ವಿವರಗಳನ್ನು ಜನರಿಗೆ ತಲುಪಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದ್ದು, ಇಂದಿನಿಂದಲೇ ಜಾರಿಗೆ ಬರಲಿದೆ.

ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದೆ. ಇದರ ವಿರುದ್ಧ ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದ್ದು, ಸರ್ಕಾರದ ಎರಡನೇ ವರ್ಷಾಚರಣೆಯ ಸಮಾವೇಶಗಳನ್ನು ನಡೆಸಲು ಮುಂದಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೈರದೇವನಹಳ್ಳಿ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿ ಇಂದು ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ, ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ವಿವಿಧ ಯೋಜನೆ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಕೆ.ಹೆಚ್. ಮುನಿಯಪ್ಪ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!