ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾರ್ಚ್.18 ಮತ್ತು 19ರಂದು ಬಿಸಿ ಗಾಳಿಯ ಪರಿಸ್ಥಿತಿ ಹೆಚ್ಚಾಗಿರಲಿದೆ. ಜನರನ್ನು ಎಚ್ಚರಿಸುವ ಸಲುವಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳ ಕಲಬುರಗಿ ಜಿಲ್ಲೆಯ ಐನಾಪುರ ಹೋಬಳಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 42.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಕಲಬುರಗಿ, ಬೀದರ್, ಬಾಗಲಕೋಟೆ, ರಾಯಚೂರು, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳ ಹಲವೆಡೆ ಮತ್ತು ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಕೆಲವು ಸ್ಥಳಗಳು ಮತ್ತು ತುಮಕೂರು, ಬಳ್ಳಾರಿ, ಗದಗ, ಕೊಪ್ಪಳ, ಉತ್ತರ ಕನ್ನಡ, ಕನ್ನಡ, ವಿಜಯನಗರ, ಚಿಕ್ಕಬಳ್ಳಾಪುರ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ 40 ° C ಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ.