ಬಾಗಲಕೋಟೆ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹುಕ್ ಕಟ್ಟಾಗಿ ಕಾರ್ಮಿಕರ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಕಮತಗಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿ ಹೆದ್ದಾರಿಯಲ್ಲಿ ದುರಂತ ಸಂಭವಿಸಿದೆ.ಟ್ರಾಕ್ಟರ್ ನಲ್ಲಿ ಕಬ್ಬು ಸಾಗಿಸುತ್ತಿದ್ದ ವೇಳೆ ಏಕಾಏಕಿ ಟ್ರ್ಯಾಕ್ಟರ್ ಹುಕ್ ಕಟ್ ಆಗಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ.
ಅಪಘಾತದಲ್ಲಿ ಕಬ್ಬು ಕಟಾವು ಮಾಡುವ ಮಹಾರಾಷ್ಟ್ರ ಮೂಲದ ಕಾರ್ಮಿಕರ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
8 ವರ್ಷದ ಹಾಗೂ 10 ವರ್ಷದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




