Ad imageAd image

ಇಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ : ಎರಡು ಲಕ್ಷ ಜನ ಭಾಗಿ ನಿರೀಕ್ಷೆ

Bharath Vaibhav
ಇಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ : ಎರಡು ಲಕ್ಷ ಜನ ಭಾಗಿ ನಿರೀಕ್ಷೆ
WhatsApp Group Join Now
Telegram Group Join Now

ಬೆಳಗಾವಿ: 1924ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಸುಮಾರು ಎರಡು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ಸಾಧ್ಯತೆ ಇದೆ. ಅಧಿವೇಶನದಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಕಾಂಗ್ರೆಸ್ ನಾಯಕರು ದಂಡೇ ಹರಿದು ಬಂದಿದೆ.

ಬೆಳಗ್ಗೆ 10:30 ಕ್ಕೆ ಬೆಳಗಾವಿಯ ಸುವರ್ಣ ಸೌಧ ಆವರಣದಲ್ಲಿ ಮಹಾತ್ಮ ಗಾಂಧೀಜಿ ಬೃಹತ್ ಪ್ರತಿಮೆ ಅನಾವರಣಗೊಳ್ಳಲಿದೆ. ಮಧ್ಯಾಹ್ನ 3 ಗಂಟೆಗೆ ಸಿಪಿಎಡ್ ಮೈದಾನದಲ್ಲಿ ‘ಜೈ ಬಾಪೂ, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ನಡೆಸಲಿದ್ದು, ಇದಕ್ಕಾಗಿ ಒಂದೂವರೆ ಲಕ್ಷಕ್ಕೂ ಅಧಿಕ ಕುರ್ಚಿಗಳನ್ನು ಹಾಕಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ನಾಯಕರ ಕಟೌಟ್, ಬ್ಯಾನರ್ ಗಳು, ಪಕ್ಷದ ಬಾವುಟಗಳು ರಾರಾಜಿಸುತ್ತಿವೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!