Ad imageAd image

ರೇಣುಕಾಸ್ವಾಮಿ ಕೊಲೆ ಪ್ರಕರಣ : ಮತ್ತಿಬ್ಬರು ಅರೆಸ್ಟ್ 

Bharath Vaibhav
ರೇಣುಕಾಸ್ವಾಮಿ ಕೊಲೆ ಪ್ರಕರಣ : ಮತ್ತಿಬ್ಬರು ಅರೆಸ್ಟ್ 
WhatsApp Group Join Now
Telegram Group Join Now

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರನ್ನು ಬಂಧಿಸಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗದ ಅನುಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗು ರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣದ ಹಿನ್ನೆಲೆ

ಚಿತ್ರದುರ್ಗದ ರೇಣುಕಾ ಸ್ವಾಮಿ ( ಕೊಲೆಯಾದ ವ್ಯಕ್ತಿ), ಈ ರೇಣುಕಾ ಸ್ವಾಮಿ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ, ಫೋಟೋ ಕಳುಹಿಸಿದ್ದನು ಎನ್ನಲಾಗಿದೆ.

ಪವಿತ್ರ ಗೌಡ ಕೂಡ ಈ ವಿಚಾರವನ್ನು ದರ್ಶನ್ ಗಮನಕ್ಕೆ ತಂದಿದ್ದರು. ನಂತರ ಯಾರೋ ಒಬ್ಬರು ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ರಾಘವೇಂದ್ರ ಎಂಬುವವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ.

ನಂತರ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಕಾರ್ ಶೆಡ್ ಒಂದರಲ್ಲಿ ಹಲ್ಲೆ ನಡೆಸಲಾಗಿದೆ. ವೇಳೆ ನಟ ದರ್ಶನ್ ಕೂಡ ಸ್ಥಳದಲ್ಲಿದ್ದರು . ಅವರ ಸೂಚನೆ ಮೇರೆಗೆ ರೇಣುಕಾ ಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿಡಿಆರ್, ಟವರ್ ಡಂಪ್, ಮೊಬೈಲ್ ಸೇರಿ ಸಾಕ್ಷ್ಯಗಳ ಕಲೆ ಹಾಕಿರುವ ಪೊಲೀಸರು ಮಾಹಿತಿ ಆಧರಿಸಿ ಕೊಲೆ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಅನೇಕ ಮಾಹಿತಿಗಳನ್ನು ಕಲೆ ಹಾಕಲಾಗಿದ್ದು, ತನಿಖೆ ಚುರುಕುಗೊಂಡಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!