Ad imageAd image

ಶಿರಾ ಬಳಿ ಭೀಕರ ಅಪಘಾತ : ಅಥಣಿ ಮೂಲದ ಇಬ್ಬರು ದುರ್ಮರಣ

Bharath Vaibhav
WhatsApp Group Join Now
Telegram Group Join Now

ತುಮಕೂರು: ಮುಂದೆ ಹೋಗುತ್ತಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ಘಟನೆ ನಡೆದಿದೆ.

ಉಮೇಶ್ ನಾಗಪ್ಪ, ಸಂತೋಷ್ ಸುರೇಶ್ ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರು.ಬೊಲೆರೋ ವಾಹನ ಚಾಲಕನಿಗೆ ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆಗೆ ಬೊಲೇರೋ ವಾಹನ ತೆರಳುತ್ತಿತ್ತು. ಮುಂದೆ ಹೋಗುತ್ತಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article
error: Content is protected !!