ಬೆಳಗಾವಿ: ಜಿಲ್ಲೆಯ ಮೂಡಲಗಿಯ ನಿಪ್ಪಾಣಿ – ಲೋಕಾಪುರ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಹಾಗೂ ಸಿಮೆಂಟ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರನ್ನು ದುರ್ದೈವಿಗಳನ್ನು ಶ್ರೀಶೈಲ್ ಹಾದಿಮನಿ ( 36 ), ಸಂಜು ಮಾರಾಪುರ (38) ಎಂದು ಗುರುತಿಸಲಾಗಿದೆ.ನಿಪ್ಪಾಣಿ – ಲೋಕಾಪುರ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಗುರ್ಲಾಪುರ ಬಳಿ ಅಪಘಾತ ಸಂಭವಿಸಿದೆ.
ಕೂಡಲೇ ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ, ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಸದ್ಯ ಮೂಡಲಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.