ಬೀದರ್: ಬೀದರ್ ನಲ್ಲಿ ಹಣ ಸಾಗಿಸುವ ವಾಹನದ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಮತ್ತೋರ್ವ ಎಸ್ ಬಿ ಐ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಶಿವಕುಮಾರ್ ಎಂಬುವವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ 2 ಕ್ಕೇರಿಕೆಯಾಗಿದೆ. ದುಷ್ಕರ್ಮಿಗಳ ಗುಂಡಿನ ದಾಳಿಗೆ ಸ್ಥಳದಲ್ಲೇ ವೆಂಕಟೇಶ್ ಎಂಬ ಸಿಬ್ಬಂದಿ ಮೃತಪಟ್ಟಿದ್ದರು.ಇದೀಗ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಶಿವಕುಮಾರ್ ಎಂಬುವವರು ಮೃತಪಟ್ಟಿದ್ದಾರೆ.
ಬೀದರ್ ನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಎಟಿಎಂ ಗಳಿಗೆ ಹಣ ಹಾಕುವ ವಾಹನದ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬೀದರ್ ನಗರದ ಶಿವಾಜಿ ಚೌಕ್ ನಲ್ಲಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಎಟಿಎಂಗೆ ಹಣ ಹಾಕುವ ವಾಹನದ ಮೇಲೆ ಗುಂಡುಹಾರಿಸಿ ಹಣದ ಬ್ಯಾಗ್ ಸಮೇತ ಎಸ್ಕೇಪ್ ಆಗಿದ್ದಾರೆ.
ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಹಾಗೂ ಶಿವಕುಮಾರ್ ಮೃತಪಟ್ಟಿದ್ದಾರೆ. ಎಟಿಎಂ ಗಳಿಗೆ ಹಣ ಕೊಂಡೊಯ್ಯುವ ವಾಹನದ ಮೇಲೆ ದಾಳಿ ನಡೆಸಿ ಹಣದ ಬಾಕ್ಸ್ ಎಗರಿಸಲಾಗಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.