ಜಮ್ಮು -ಕಾಶ್ಮೀರ್: ಉಗ್ರರೊಂದಿಗೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ನಡೆದಿದೆ.
ಆಪರೇಷನ್ಅ ಖಾಲ್ ಕಾರ್ಯಾಚರಣೆಯಲ್ಲಿ ಲ್ಯಾನ್ಸ್ ನಾಯಕ್ ಪ್ರೀತ್ಪಾಲ್ ಸಿಂಗ್ ಮತ್ತು ಸಿಪಾಯಿ ಹರ್ಮಿಂದರ್ ಸಿಂಗ್ ಹುತಾತ್ಮರಾಗಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಇದುವರೆಗೆ ಒಬ್ಬ ಭಯೋತ್ಪಾದಕನ ಮೃತದೇಹ ಪತ್ತೆಯಾಗಿರುವ ಬಗ್ಗೆ ಅಧಿಕೃತ ದೃಢೀಕರಣ ಮಾತ್ರ ಬಂದಿದೆ.
ಎನ್‌ಕೌಂಟರ್‌ನಲ್ಲಿ ಇಬ್ಬರು ಸೈನಿಕರು ಬಲಿಯಾಗಿದ್ದು, ಇತರ 9 ಯೋಧರು ಗಾಯಗೊಂಡಿದ್ದಾರೆ.




