ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅಕ್ನೂರ್ ಸೆಕ್ಟರ್ನಲ್ಲಿ ಮಂಗಳವಾರ ಶಂಕಿತ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡ ಪರಿಣಾಮ ಕನಿಷ್ಠ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಅಲ್ಲದೇ ಓರ್ವ ಯೋಧ ಗಾಯಗೊಂಡಿರುವಂತ ಘಟನೆ ನಡೆದಿದೆ ಎಂದು ಭಾರತೀಯ ಸೇನೆ ತಿಳಿಸಿದೆ.
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದೆ. ಇಂದು ಸುಧಾರಿತ ಸ್ಪೋಟಕ ಸಾಧನ ಬಳಸಿ ಸ್ಪೋಟಿಸಿದರ ಪರಿಣಾಮ ಅಕ್ನೋರ್ ಸೆಕ್ಟರ್ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಜೊತೆಗೆ ಓರ್ವ ಯೋಧ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.