ರಾಯ್ಪುರ : ಛತ್ತೀಸ್‌ಗಢದ ಬಿಜಾಪುರದ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 12 ಅಲ್ಲ 31 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಬಸ್ತಾರ್ ಐಜಿ ಸುಂದರರಾಜ್ ಪಿ ಮಾಹಿತಿ ನೀಡಿದ್ದಾರೆ.
ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕರನ್ನು ಹೆಲಿಕಾಪ್ಟರ್ ಮೂಲಕ ರಾಯ್‌ಪುರಕ್ಕೆ ಕಳುಹಿಸಲಾಗಿದೆ ಎಂದರು.
ಮಾವೋವಾದಿಗಳ ಬಗ್ಗೆ ಮಾಹಿತಿ ಬಂದ ನಂತರ ಸ್ಥಳಕ್ಕೆ ಪಡೆಗಳನ್ನು ನಿಯೋಜಿಸಲಾಗಿದೆ. ಬೆಳಗ್ಗೆಯಿಂದ ಗುಂಡಿನ ಚಕಮಕಿ ನಡೆಯುತ್ತಿತ್ತು. ಪ್ರಸ್ತುತ, ನಕ್ಸಲೀಯರನ್ನು ಬಿಜಾಪುರ ಡಿಆರ್‌ಜಿ, ಎಸ್‌ಟಿಎಫ್ ಮತ್ತು ಬಸ್ತಾರ್ ಫೈಟರ್ಸ್‌ನ ಸೈನಿಕರು ಸುತ್ತುವರಿದಿದ್ದಾರೆ.
ಇದು ಒಂದು ದೊಡ್ಡ ಕಾರ್ಯಾಚರಣೆಯಾಗಿದ್ದು, ಹತ್ಯೆಯಾದ ನಕ್ಸಲೀಯರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಡಿಐಜಿ ಹೇಳಿದರು.ಮಾಹಿತಿಯ ಪ್ರಕಾರ, ಹತ್ಯೆಗೀಡಾದ ನಕ್ಸಲೀಯರಿಂದ ಅನೇಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ