ಯಾದಗಿರಿ : ಬಲವಂತವಾಗಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ರ್ಮ ಕ್ಕೆ ಮತಾಂತರ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಇದೀಗ ಪೊಲೀಸರು ವಶಕ್ಕೆ ಪಡಿಸಿಕೊಂಡಿರುವ ಘಟನೆ ಯಾದಗಿರಿ ನಗರದ ಲಕ್ಷ್ಮಿ ಬಡಾವಣೆಯಲ್ಲಿ ನಡೆದಿದೆ.
ಬೆಂಗಳೂರು ಮೂಲದ ಮಹಿಳೆಯರಾದ ರೇಚಲ್ ರಾಬರ್ಟ್ ಹಾಗೂ ಕರುಣಾ ಅವರು, ಮತಾಂತರಕ್ಕೆ ಮುಂದಾಗಿದ್ದರು.ಇನ್ನೀಬ್ಬರು ಮಹಿಳೆಯರು ಪರಾರಿಯಾಗಿದ್ದಾರೆ.
ಹಿಂದೂ ಮನೆಗೆ ತೆರಳಿ ಬಲವಂತವಾಗಿ ಕ್ರೈಸ್ತ ಧರ್ಮದ ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸಿದ್ದಾರೆ.ನಗರದ ಲಕ್ಷ್ಮೀ ಬಡಾವಣೆಯಲ್ಲಿ ಕೇಳಿಬಂದಿದೆ. ಕೂಡಲೇ ಎಚ್ಚೆತ್ತ ಜನ, ಮತಾಂತರಕ್ಕೆ ಮುಂದಾದ ಇಬ್ಬರು ಕ್ರಿಶ್ಚಿಯನ್ ಮಹಿಳೆಯರನ್ನು ಪೋಲಿಸರಿಗೆ ಒಪ್ಪಿಸಿದ್ದಾರೆ.
ಭೂಮಿ ಮೇಲೆ ದೇವರು ಅಂತ ಇದ್ದರೆ ಯೇಸುಕ್ರಿಸ್ತ ಒಬ್ಬನೆ. ನಿಮ್ಮ ದೇವರುಗಳು ನಿಮಗೆ ರಕ್ಷಣೆ ನೀಡುವುದಿಲ್ಲ. ನಿಮ್ಮ ಹಿಂದೂ ಧರ್ಮ ತ್ಯಜಿಸಿ, ಕ್ರೈಸ್ತ ಧರ್ಮಕ್ಕೆ ಬನ್ನಿ. ನಿಜವಾದ ದೇವರು ಯೇಸುಕ್ರಿಸ್ತನನ್ನು ಅನುಸರಿಸಲು ಹಿಂದು ಧರ್ಮ ತ್ಯಜಿಸಿ ಮತಾಂತರಗೊಳ್ಳಿ. ಎಂದು ಹೀಗೆ ನಮ್ಮ ಮನೆಗೆ ಬಂದು ನಮ್ಮನ್ನು ಬಲವಂತವಾಗಿ ಮತಾಂತರ ಮಾಡುವುದಕ್ಕೆ ಪ್ರಚೋದನೆ ಮಾಡಿದ್ದಾರೆ.ಎಂದು ಸಾರ್ವಜನಿಕರು ಪೊಲೀಸರಿಗೆ ಅಗ್ರಹಿಸಿದ್ದಾರೆ.