ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಭೀಕರ ಅವಘಡ ಸಂಭವಿಸಿದ್ದು,ವಿದ್ಯುತ್ ಕಂಬ ಬಿದ್ದು ಇಬ್ಬರು ಮಹಿಳೆಯರು ಪ್ರಾಣಬಿಟ್ಟಿದ್ದಾರೆ.
ಸದ್ದುಗುಂಟೆ ಪಾಳ್ಯದಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮತಿ (35) ಮತ್ತು ಸೋನಿ ( 36) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ರಸ್ತೆ ಕಾಮಗಾರಿ ನಡೆಯುವ ವೇಳೆ ಬೆಳಿಗ್ಗೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿ ಹೊಡೆದಿತ್ತು. ಸಂಜೆ ಕಂಬ ಮಹಿಳೆಯರ ಮೇಲೆ ಬಿದ್ದಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಬೈಯಪ್ಪನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿಡ್ದಾರೆ. ರಸ್ತೆ ಕಾಮಗಾರಿ ಗುತ್ತಿಗೆ ಪಡೆದಿರುವ ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ.