ಬೆಂಗಳೂರು: 2024 -25 ನೇ ಸಾಲಿನ ಶೈಕ್ಷಣಿಕ ಅವಧಿ ನಾಳೆಯಿಂದ ಆರಂಭವಾಗಲಿದೆ. ಮೇ 29ರ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಲಿದ್ದು, ಮಕ್ಕಳ ಸ್ವಾಗತಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ.
ಈ ಬಾರಿ ಶಾಲೆಗೆ ಮಕ್ಕಳು ಬರುತ್ತಿದ್ದಂತೆ ಎರಡು ಜೊತೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ನೀಡಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.ಈಗಾಗಲೇ ಸಮವಸ್ತ್ರ ಪೂರ್ಣ ಪ್ರಮಾಣದಲ್ಲಿ ತಾಲೂಕು ಮಟ್ಟಕ್ಕೆ ರವಾನೆಯಾಗಿದ್ದು, ಶೇ. 75 ರಿಂದ 80ರಷ್ಟು ಪಠ್ಯಪುಸ್ತಕಗಳನ್ನು ಕೂಡ ಸರಬರಾಜು ಮಾಡಲಾಗಿದೆ.
ಇನ್ನೆರಡು ದಿನಗಳಲ್ಲಿ ಉಳಿದ ಪಠ್ಯಪುಸ್ತಕಗಳ ಪೂರೈಕೆಯಾಗಲಿದ್ದು, ಬಿಇಓ, ಡಿಡಿಪಿಐಗಳು ಶಾಲೆಗಳಿಗೆ ಅವುಗಳನ್ನು ತಲುಪಿಸಿ ಶಾಲೆ ಪ್ರಾರಂಭದ ದಿನವೇ ವಿತರಣೆಗೆ ಕ್ರಮ ವಹಿಸಬೇಕು. ಶಾಲೆಯನ್ನು ಸ್ವಚ್ಛಗೊಳಿಸಿ ತಳಿರು ತೋರಣ, ರಂಗೋಲಿ ಬಿಡಿಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ.