2025 – 2026 ರ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಬಡವರು,ಯುವಕರು,ರೈತರು, ಹಾಗೂ ಮಹಿಳೆಯರ, ಏಳಿಗೆಗಾಗಿ ಹೆಚ್ಚು ಆದ್ಯತೆಯನ್ನು ನೀಡಲಾಗಿದೆ ಎಂದು ಹುನಗುಂದ ಮತಕ್ಷೇತ್ರದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಪತ್ರಿಕಾ ಹೇಳಿಕೆ ನೀಡಿದರು. 2025-26 ನೆ ಸಾಲಿನ ಕೇಂದ್ರ ಸರ್ಕಾರದ ಬಜೆಟ್ಟಿನಲ್ಲಿ ಬಡವರ ಯುವಕರ ರೈತರ ಮಹಿಳೆಯರ ಏಳಿಗೆಗಾಗಿ ಹೆಚ್ಚು ಆದ್ಯತೆ ನೀಡಲಾಗಿದೆ, ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ನೆರವು ಪ್ರಧಾನ ಮಂತ್ರಿ ದನ್ ಧಾನ್ಯ ಕೃಷಿ ಯೋಜನೆ , ನಗರಗಳ ಅಭಿವೃದ್ಧಿಗಾಗಿ ಯೋಜನೆ, ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅನುಕೂಲವಾಗುವ ನಿಟ್ಟಿನಲ್ಲಿ ಒಟ್ಟಾರೆ ದೇಶದ ಅಭಿವೃದ್ಧಿಗಾಗಿ ಮಾಡಿದ ಬಜೆಟ್ ಇದಾಗಿದೆ ಎಂದು ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಕೇಂದ್ರದ ಬಜೆಟ್ ನ್ನು ಸ್ವಾಗತಿಸಿದರು.